ಉಡುಪಿ: ಸೆಪ್ಟೆಂಬರ್ 16 ರಂದು ಬೆಳಿಗ್ಗೆ 10 ರಿಂದ 11 ರ ವರೆಗೆ ಕೋವಿಡ್ ಲಸಿಕಾಕರಣಕ್ಕೆ ಸಂಬಂಧಿಸಿದಂತೆ ಫೋನ್ ಇನ್ ಕಾರ್ಯಕ್ರಮ ನಡೆಯಲಿದ್ದು, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯರ್ನಿಹಣಾಧಿಕಾರಿ ಡಾ.ನವೀನ್ ಭಟ್, ವಿಶ್ವ ಆರೋಗ್ಯ ಸಂಸ್ಥೆಯ ಸಲಹೆಗಾರ ಡಾ.ಅಶ್ವಿನ್ ಕುಮಾರ್ ಅವರು ಭಾಗವಹಿಸಲಿದ್ದಾರೆ.
ಸಾರ್ವಜನಿಕರು ಕೋವಿಡ್ ಲಸಿಕೆಗೆ ಸಂಬಂದಿಸಿದಂತೆ ಯಾವುದೇ ಪ್ರಶ್ನೆಗಳು ಮತ್ತು ಸಂದೇಹಗಳಿಗೆ ದೂರವಾಣಿ ಸಂಖ್ಯೆ. 96639 57222 ನ್ನು ಸಂಪರ್ಕಿಸುವಂತೆ ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ, ಪ್ರಯೋಜನ ಪಡೆಯುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.