ದುರ್ಗಾ ದೌಡ್-ಪ್ರಚೋದನಕಾರಿ ಭಾಷಣದ ವಿರುದ್ದ ಕ್ರಮ ಕೈಗೊಳ್ಳಿ: ಸಿಪಿಐ(ಎಂ) ಆಗ್ರಹ

ಉಡುಪಿ: ಅಕ್ಟೋಬರ್ 2ರಂದು ಉಡುಪಿಯಲ್ಲಿ ನಡೆದ ದುರ್ಗಾ ದೌಡ್ ಕಾರ್ಯಕ್ರಮದ ಸಂದರ್ಭದಲ್ಲಿ ಖಡ್ಗವನ್ನು ಝಳಪಿಸುತ್ತಾ ಮೆರವಣಿಗೆ ಮಾಡಿದ್ದು ಮಾತ್ರವಲ್ಲದೆ, ಸಭೆಯಲ್ಲಿ ಉದ್ರೇಕಕಾರಿ ಭಾಷಣ ಮಾಡಿದ್ದು ಪತ್ರಿಕೆಗಳಲ್ಲಿ ವರದಿಯಾಗಿದೆ. ಇದರ ವಿರುದ್ದ ಕಠಿಣ ಕ್ರಮ ಕೈಗೊಳ್ಳಬೇಕೆಂದು ಸಿಪಿಐ(ಎಂ) ಉಡುಪಿ ಜಿಲ್ಲಾ ಸಮಿತಿ ಆಗ್ರಹಿಸುತ್ತದೆ.

ಈ ಕಾರ್ಯಕ್ರಮದಲ್ಲಿ ರಾಜ್ಯದ ಸಚಿವರಾದ ಸುನೀಲ್ ಕುಮಾರ್ ಮತ್ತು ಕೆಲವು ಶಾಸಕರೂ ಭಾಗವಹಿಸಿದ್ದು ಅವರ ಎದುರಿನಲ್ಲೇ ಇಂತಹ ಕಾರ್ಯಕ್ರಮಗಳು ನಡೆಯುತ್ತಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ. ಜನರು ಇಂತಹ ಪ್ರಜಾಪ್ರಭುತ್ವ ವಿರೋಧಿ ನಡವಳಿಕೆಗಳನ್ನು ತಿರಸ್ಕರಿಸಬೇಕೆಂದು ಸಿಪಿಐ(ಎಂ) ಮನವಿ ಮಾಡುತ್ತದೆ ಎಂದು ಉಡುಪಿ ಜಿಲ್ಲಾ ಸಮಿತಿ ಸಿಪಿಐ(ಎಂ) ಕಾರ್ಯದರ್ಶಿ ಬಾಲಕೃಷ್ಣ ಶೆಟ್ಟಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.