ಕಾರ್ಕಳ: 75 ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಆಯೋಜಿಸಲಾಗಿರುವ ಉಡುಪಿ ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ಕಾರ್ಕಳ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಸುಮಂತ್ ಶೆಟ್ಟಿ ಮತ್ತು ನಿಹಾರ್ ಭಟ್ ಪ್ರಥಮ ಸ್ಥಾನ ಗಳಿಸಿದ್ದಾರೆ. ‘ಆಜಾದಿ ಕಾ ಅಮೃತ್ ಮಹೋತ್ಸವ್’ ನ ಸುಸಂದರ್ಭದಲ್ಲಿ ಪದವಿ ಪೂರ್ವ ವಿದ್ಯಾರ್ಥಿಗಳಿಗಾಗಿ ಮಲ್ಪೆಯ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆಗಸ್ಟ್ 03 ರಂದು ರಸಪ್ರಶ್ನೆ ಸ್ಪರ್ಧೆ ಏರ್ಪಡಿಸಲಾಗಿತ್ತು.
ರಸಪ್ರಶ್ನೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ವಿಜೇತ ವಿದ್ಯಾರ್ಥಿಗಳಾದ ಸುಮಂತ್ ಶೆಟ್ಟಿ ಮತ್ತು ನಿಹಾರ್ ಭಟ್ ಇವರನ್ನು ಕ್ರಿಯೇಟಿವ್ ವಿದ್ಯಾ ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.