ಉಡುಪಿ: ಖ್ಯಾತ ಕ್ರಿಕೆಟ್ ಆಟಗಾರ ಮತ್ತು ಟೀಂ ಇಂಡಿಯಾ ಮಾಜಿ ಕೋಚ್ ರವಿಶಾಸ್ತ್ರಿಯವರು ಶ್ರೀಕೃಷ್ಣಮಠಕ್ಕೆ ಆಗಮಿಸಿ ಕೃಷ್ಣದೇವರ ದರ್ಶನ ಮಾಡಿ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಪರ್ಯಾಯ ಮಠದ ದಿವಾನರದಾದ ವರದರಾಜ ಭಟ್,ವಾದಿರಾಜ ಪೆಜತ್ತಾಯ,ವ್ರಜನಾಥ ಆಚಾರ್ಯ,ಲಾತವ್ಯ ಆಚಾರ್ಯ ,ಅಶ್ವಿನ್ ಮೊದಲಾದವರು ಉಪಸ್ಥಿತರಿದ್ದರು.
ಇದಕ್ಕೂ ಮುನ್ನ ಮಂಗಳವಾರದಂದು ಅವರು ಪ್ರತಿವರ್ಷದಂತೆ ಈ ಬಾರಿಯೂ ಕಾರ್ಕಳ ಕರ್ವಾಲಿನ ಯರ್ಲಪಾಡಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನಕ್ಕೂ ಭೇತಿ ನೀಡಿ ಪೂಜೆ ಸಲ್ಲಿಸಿದ್ದರು.