ಮಂಗಳೂರು: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಕಡಬ ತಾಲೂಕಿನ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಬಲ್ಯದಲ್ಲಿ ಗುರುವಾರ ಸಂಭವಿಸಿದೆ.
ಬಲ್ಯ ಮದ್ರಾಡಿ ನಿವಾಸಿ ರಾಮಚಂದ್ರ ಗೌಡ ಎಂಬವರ ಪುತ್ರ ಸುಬ್ರಹ್ಮಣ್ಯ ಕಾಲೇಜಿನ ಅಂತಿಮ ವರ್ಷದ ಪದವಿ ವಿದ್ಯಾರ್ಥಿ ಮೋಕ್ಷಿತ್(21) ಮೃತಪಟ್ಟವರು.
ಮೋಕ್ಷಿತ್ ತನ್ನ ಪಲ್ಸರ್ ಬೈಕಿನಲ್ಲಿ ಬಲ್ಯದಿಂದ ಕಡಬಕ್ಕೆ ತೆರಳುತ್ತಿದ್ದ ವೇಳೆ ಕೆಎಸ್ಸಾರ್ಟಿಸಿ ಬಸ್ ನಡುವೆ ಢಿಕ್ಕಿಯುಂಟಾಗಿ ಈ ದುರ್ಘಟನೆ ಸಂಭವಿಸಿದೆ.