udupixpress
Home Trending ಸುಶಾಂತ್ ಸಿಂಗ್ ಸಂಶಯಾಸ್ಪದ ಸಾವು ಪ್ರಕರಣ: ನಟಿ ರಿಯಾ ಚಕ್ರವರ್ತಿ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು

ಸುಶಾಂತ್ ಸಿಂಗ್ ಸಂಶಯಾಸ್ಪದ ಸಾವು ಪ್ರಕರಣ: ನಟಿ ರಿಯಾ ಚಕ್ರವರ್ತಿ ವಿರುದ್ಧ ಕ್ರಿಮಿನಲ್ ಕೇಸ್ ದಾಖಲು

ನವದೆಹಲಿ: ಬಾಲಿವುಡ್ ನಟ ಸುಶಾಂತ್ ಸಿಂಗ್ ಸಂಶಯಾಸ್ಪದ ಸಾವಿನ ಪ್ರಕರಣದ ಪ್ರಮುಖ ಆರೋಪಿ, ಮಾಜಿ ಪ್ರೇಯಸಿ ರಿಯಾ ಚಕ್ರವರ್ತಿ ವಿರುದ್ಧ ಮಾದಕ ವಸ್ತು ನಿಯಂತ್ರಣ ಇಲಾಖೆ ಕ್ರಿಮಿನಲ್ ಕೇಸ್ ದಾಖಲಿಸಿದೆ.
ಸುಶಾಂತ್ ಸಿಂಗ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿ ರಿಯಾ ಚಕ್ರವರ್ತಿ ಸದ್ಯ ಸಿಬಿಐ ತನಿಖೆ ಎದುರಿಸುತ್ತಿದ್ದಾಳೆ. ಕಳೆದ ನಾಲ್ಕು ದಿನಗಳಿಂದ ಸಿಬಿಐ ಅಧಿಕಾರಿಗಳಿಂದ ತೀವ್ರ ವಿಚಾರಣೆಗೆ ಒಳಗಾಗುತ್ತಿದ್ದು, ಅಧಿಕಾರಿಗಳ ಪ್ರಶ್ನೆಗೆ ಉತ್ತರಿಸುತ್ತಿದ್ದಾರೆ.
ಈ ನಡುವೆ ರಿಯಾಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಡ್ರಗ್ಸ್ ಮಾಫಿಯಾದ ನಂಟು ಸುತ್ತಿಕೊಂಡಿದೆ. ಇಡಿ ಅಧಿಕಾರಿಗಳ ವಿಚಾರಣೆ ವೇಳೆ ರಿಯಾಳ ವಾಟ್ಸಪ್ ಸಂದೇಶ ಡ್ರಗ್ ಮಾಫಿಯಾದ ಜೊತೆಗಿನ ಸಂಪರ್ಕದ ಬಗ್ಗೆ ಸುಳಿವು ನೀಡಿತ್ತು. ಈ ಆಧಾರದಲ್ಲಿ ರಿಯಾ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲಾಗಿದೆ.
error: Content is protected !!