ಬಸ್ ನಲ್ಲಿ ಶೇ.50ಕ್ಕಿಂತ ಹೆಚ್ಚು ಪ್ರಯಾಣಿಕರನ್ನು ತುಂಬಿದರೆ ಕ್ರಿಮಿನಲ್ ಕೇಸ್ ದಾಖಲು: ಡಿಸಿ ಜಗದೀಶ್ ಎಚ್ಚರಿಕೆ

ಉಡುಪಿ: ಜಿಲ್ಲೆಯಲ್ಲಿ ಕೊರೊನಾ ಸಂಪೂರ್ಣವಾಗಿ ಮುಕ್ತವಾಗಿಲ್ಲ. ಕೊರೊನಾ ಮುಕ್ತ ಜಿಲ್ಲೆಯನ್ನಾಗಿಸುವುದು ನಮ್ಮ ಗುರಿ. ಎಲ್ಲಿ ಪ್ರಕರಣ ಹೆಚ್ಚಾಗುತ್ತಿದೆ. ಏನು ಕಾರಣ ಎಂಬುವುದರ ಕುರಿತು ಅವಲೋಕನ ನಡೆಸಿ, ಆ ವರದಿಯ ಆಧಾರದ ಮೇಲೆ ಕ್ರಮ ಕೈಗೊಳ್ಳುತ್ತೇವೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಹೇಳಿದ್ದಾರೆ.

ಬಸ್ ನಲ್ಲಿ ಪ್ರಯಾಣಿಕರನ್ನು ಭರ್ತಿ ಮಾಡುವ ಬಹಳಷ್ಟು ಮಂದಿ ನಮ್ಮಲ್ಲಿದ್ದಾರೆ. ಯಾರಾದ್ರೂ ಶೇ. 50ಕ್ಕಿಂತ ಹೆಚ್ಚಿನ ಜನರನ್ನು ಬಸ್ಸಿನಲ್ಲಿ ತುಂಬಿಸಿದರೆ, ಅರ್ಧದಲ್ಲೇ ಪ್ರಯಾಣಿಕರನ್ನು ಇಳಿಸಿ ಬಸ್ ಮಾಲೀಕರು, ನಿರ್ವಾಹಕರು, ಚಾಲಕರ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸುತ್ತೇವೆ ಎಂದು ಅವರು ಎಚ್ಚರಿಸಿದ್ದಾರೆ.