ಹೆಮ್ಮಾಡಿ; ಇನ್ಸ್ಟಿಟ್ಯೂಟ್ ಆಫ್ ಕಂಪನಿ ಸೆಕ್ರೆಟರಿ ಆಫ್ ಇಂಡಿಯಾ (Institute of Company Secretary of India) ಅವರು ಮೇ4ರಂದು ನಡೆಸಿದ ಅತ್ಯಂತ ಕಠಿಣಕರವಾದ CSEET ಅರ್ಹತಾ ಪರೀಕ್ಷೆಯಲ್ಲಿ ಹೆಮ್ಮಾಡಿ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಧೀರಜ್ 119/200 ಅಂಕಗಳನ್ನು ಪಡೆದು ತೇರ್ಗಡೆಯಾಗುವ ಮೂಲಕ ಮುಂದಿನ ಹಂತದ ಪರೀಕ್ಷೆಗೆ ಅರ್ಹತೆ ಪಡೆದಿದ್ದಾರೆ.
ಇನ್ಸಿಟ್ಯೂಟ್ ಆಫ್ ಕಂಪನಿ ಸೆಕ್ರೆಟರಿ ಆಫ್ ಇಂಡಿಯಾ ನಡೆಸುವ ರಾಷ್ಟ್ರಮಟ್ಟದ ಅತೀ ಕಷ್ಟಕರವಾದ ಪರೀಕ್ಷೆ ಇದಾಗಿದ್ದು ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಧೀರಜ್ ಪಿಯುಸಿ ಯಲ್ಲಿಯೇ ಮೊದಲ ಹಂತದಲ್ಲೇ ತೇರ್ಗಡೆ ಹೊಂದಿರುವುದು ವಿಶೇಷವಾಗಿದೆ.
ಪ್ರತಿಭಾವಂತ ವಿದ್ಯಾರ್ಥಿಯನ್ನು ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.