ನಾಳೆ ಕಾರ್ಕಳದಲ್ಲಿ ಸಾಂಸ್ಕೃತಿಕ ಸೌರಭ ಕಾರ್ಯಕ್ರಮ

ಉಡುಪಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ, ಕೋಟಿ ಚೆನ್ನಯ್ಯ ಥೀಂ ಪಾರ್ಕ್ ಅಭಿವೃದ್ಧಿ ಸಮಿತಿ ಹಾಗೂ ಯಕ್ಷ ರಂಗಾಯಣ ಕಾರ್ಕಳ ಇವರ ಸಹಯೋಗದೊಂದಿಗೆ ಸಾಂಸ್ಕೃತಿಕ ಸೌರಭ ಕಾರ್ಯಕ್ರಮವು ಡಿಸೆಂಬರ್ 24 ರಂದು ಸಂಜೆ 4 ಗಂಟೆಗೆ ಕಾರ್ಕಳ ಕೋಟಿ ಚೆನ್ನಯ್ಯ ಥೀಂ ಪಾರ್ಕ್ನಲ್ಲಿ ನಡೆಯಲಿದೆ.

ಕಾರ್ಯಕ್ರಮವನ್ನು ರಾಜ್ಯದ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ ಸುನಿಲ್ ಕುಮಾರ್ ಉದ್ಘಾಟಿಸಲಿದ್ದು, ಕಾರ್ಕಳ ಭುವನೇಂದ್ರ ಕಾಲೇಜಿನ ಪ್ರಾಂಶುಪಾಲ ಡಾ. ಎ ಮಂಜುನಾಥ ಕೋಟ್ಯಾನ್ ಅಧ್ಯಕ್ಷತೆ ವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ವೀಣಾ ವಾದನ, ಸುಗಮ ಸಂಗೀತ, ಚಿಟ್ಟಿ ಮೇಳ, ಪಾಳೇಗಾರ ವೇಷ, ಪೂಜಾ ಕುಣಿತ, ಸೋಮನ ಕುಣಿತ, ವೀರಗಾಸೆ ಕುಣಿತ, ಜಾನಪದ ಸಂಗೀತ ಮತ್ತು ಬೈಲೂರು ಚೈತನ್ಯ ಕಲಾವಿದರಿಂದ ಹಾಸ್ಯಮಯ ತುಳು ನಾಟಕ ನಡೆಯಲಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.