CWRC : ಮತ್ತೆ 15 ದಿನ ತಮಿಳುನಾಡಿಗೆ 2,600 ಕ್ಯೂಸೆಕ್ ನೀರು ಬಿಡುವಂತೆ ಶಿಫಾರಸ್ಸು

ನವದೆಹಲಿ/ಬೆಂಗಳೂರು: ಈ ಹಿಂದೆ ಕಾವೇರಿ ನೀರು ನಿರ್ವಹಣಾ ಮಂಡಳಿ ತಮಿಳುನಾಡಿಗೆ 3 ಸಾವಿರ ಕ್ಯೂಸೆಕ್​​ ನೀರು ಬಿಡುವಂತೆ ತಿಳಿಸಿತ್ತು. ಅಕ್ಟೋಬರ್ 16ರಿಂದ ಅಕ್ಟೋಬರ್ 31ರ ವರೆಗೆ​​ ನೀರು ಹರಿಸುವಂತೆ ತಿಳಿಸಲಾಗಿತ್ತು.ಕಾವೇರಿ ನದಿ ನೀರು ಹಂಚಿಕೆ ವಿಚಾರದಲ್ಲಿ ರಾಜ್ಯಕ್ಕೆ ಮತ್ತೊಮ್ಮೆ ಆಘಾತ ಎದುರಾಗಿದೆ. ನವೆಂಬರ್​ 1 ರಿಂದ 15 ರವರೆಗೆ ಪ್ರತಿದಿನ 2,600 ಕ್ಯೂಸೆಕ್​ ನೀರು ಬಿಡುವಂತೆ ಕಾವೇರಿ ನೀರು ನಿಯಂತ್ರಣಾ ಸಮಿತಿ ಕರ್ನಾಟಕಕ್ಕೆ ಆದೇಶಿಸಿದೆ.ನವೆಂಬರ್ 1ರಿಂದ ನವೆಂಬರ್ 15ರ ವರೆಗೆ ತಮಿಳುನಾಡಿಗೆ ಪ್ರತಿದಿನ 2,600 ಕ್ಯೂಸೆಕ್ ನೀರು ಬಿಡಬೇಕು ಎಂದು ಕಾವೇರಿ ನೀರು ನಿಯಂತ್ರಣ ಸಮಿತಿ (ಸಿಡಬ್ಲ್ಯೂಆರ್‌ಸಿ) ಕರ್ನಾಟಕಕ್ಕೆ ಆದೇಶ ನೀಡಿದೆ.