ಡಿ.6: ಇಂಧನ ಸಚಿವರ ಪ್ರವಾಸ ಕಾರ್ಯಕ್ರಮ

ಉಡುಪಿ: ಕರ್ನಾಟಕ ಸರಕಾರದ ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ವಿ ಸುನಿಲ್ ಕುಮಾರ್ ಅವರು ಡಿಸೆಂಬರ್ 6 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದು, ಅಂದು ಬೆಳಗ್ಗೆ 8.30 ಕ್ಕೆ ಕಲ್ಲಂಬಾಡಿ ಪದವು ನಲ್ಲಿ ನೂತನ ವಿದ್ಯುತ್ ಪರಿವರ್ತಕದ ಉದ್ಘಾಟನೆ ಹಾಗೂ ಕಲ್ಲಂಬಾಡಿ-ಊದು ರಸ್ತೆಯ ಗುದ್ದಲಿಪೂಜೆ ಕಾರ್ಯಕ್ರಮದಲ್ಲಿ ಭಾಗವಹಿಸಿ, ನಂತರ ಬೆಳ್ತಂಗಡಿಗೆ ತೆರಳಲಿರುವರು. ಮಧ್ಯಾಹ್ನ 2.30 ಕ್ಕೆ ಕಾರ್ಕಳ ವಿಕಾಸ ಜನಸೇವಾ ಕಚೇರಿಯಲ್ಲಿ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಭಿವೃದ್ಧಿ ಕಾಮಗಾರಿಗಳ ಕುರಿತು ಅಧಿಕಾರಿಗಳೊಂದಿಗೆ ಸಭೆ, 3.30 ಕ್ಕೆ ಸಾಣೂರು ಮಠದ ಕೆರೆ ಭೇಟಿ, ಅಭಿವೃದ್ಧಿ ಕಾಮಗಾರಿ ಪರಿಶೀಲನೆ ನಡೆಸಿ ನಂತರ ಚಿಕ್ಕಮಗಳೂರಿಗೆ ತೆರಳಲಿರುವರು.