ಕುಂದಾಪುರ: ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟಕ್ಕೆ ಕರ್ನಾಟಕ ಸರ್ಕಾರದ ನಾಮ ನಿರ್ದೇಶಿತ ನಿರ್ದೇಶಕರಾಗಿ ಎನ್.ಮಂಜಯ್ಯ ಶೆಟ್ಟಿ ಸಬ್ಲಾಡಿ ನೇಮಕಗೊಂಡಿದ್ದಾರೆ.
ವಂಡ್ಸೆ ಸಹಕಾರಿ ವ್ಯವಸಾಯಿಕ ಸಂಘ ಇದರ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿರುವ ಇವರು ಕಳೆದ ಕೆಲವು ದಶಕಗಳಿಂದ ಹೈನುಗಾರಿಕೆಯಲ್ಲಿ ತೊಡಗಿಕೊಂಡಿದ್ದಾರೆ. ಪ್ರಗತಿಪರ ಕೃಷಿಕರಾಗಿ ಕೃಷಿಕ್ಷೇತ್ರದಲ್ಲಿಯೂ ಗುರುತಿಸಿಕೊಂಡಿದ್ದರು. ಹುಣ್ಸೆಮಕ್ಕಿ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾಗಿರುವ ಇವರು ರಾಜಕೀಯ, ಕೃಷಿ, ಸಹಕಾರ, ಹೈನುಗಾರಿಕಾ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಜಿಲ್ಲಾ ಜೆಡಿಎಸ್‌ನ ಹಿರಿಯ ಉಪಾಧ್ಯಕ್ಷರಾಗಿರುವ ಇವರು, ಉಡುಪಿ ಜಿಲ್ಲಾ ಜೆಡಿಎಸ್‌ನ ಅಧ್ಯಕ್ಷರಾದ ಯೋಗೀಶ್ ಶೆಟ್ಟಿ ಇವರ ಶಿಫಾರಸ್ಸಿನ ಮೆರೆಗೆ ರಾಜ್ಯದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರ ಮಾರ್ಗದರ್ಶನ ಮತ್ತು ರಾಜ್ಯ ಸಹಕಾರಿ ಸಚಿವ ಬಂಡೆಪ್ಪ ಕಾಶಂಪುರ ಅವರ ಆದೇಶದ ಮೆರೆಗೆ ಈ ನೇಮಕಾತಿ ನಡೆದಿದೆ.