ಬೆಂಗಳೂರು: ಡಿ.ಕೆ. ಶಿವಕುಮಾರ್ D. K. Shivakumar ಅವರು ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರು.
ನಗರದ ಲೋಕಭವನದ ಗಾಜಿನ ಮನೆಯಲ್ಲಿ ಇಂದು ಸಂಜೆ ನಡೆದ ಭವ್ಯ ಪ್ರಮಾಣವಚನ ಸಮಾರಂಭದಲ್ಲಿ ರಾಜ್ಯಪಾಲರು ಡಿ.ಕೆ. ಶಿವಕುಮಾರ್ ಅವರಿಗೆ ಪ್ರಮಾಣವಚನ ಬೋಧಿಸಿದರು.
ಸಂವಿಧಾನದ ಪ್ರತಿಯನ್ನು ಕೈಯಲ್ಲಿ ಹಿಡಿದ ಡಿ.ಕೆ. ಶಿವಕುಮಾರ್ ಅವರು ತಮ್ಮ ಆರಾಧ್ಯ ದೈವ ಹಾಗೂ ಕುಟುಂಬದ ಪೂಜ್ಯರಾದ ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು. ಈ ವೇಳೆ ಸಮಾರಂಭದಲ್ಲಿ ಹಾಜರಿದ್ದ ಗಣ್ಯರು, ಪಕ್ಷದ ಮುಖಂಡರು ಹಾಗೂ ಸಾವಿರಾರು ಕಾರ್ಯಕರ್ತರು ಹರ್ಷೋದ್ಗಾರ ವ್ಯಕ್ತಪಡಿಸಿದರು.
ಪ್ರಮಾಣವಚನ ಸ್ವೀಕರಿಸುವ ಮುನ್ನ ಡಿ.ಕೆ. ಶಿವಕುಮಾರ್ ಅವರು ವೇದಿಕೆಯಲ್ಲಿ ನೆಲಕ್ಕೆ ಅಡ್ಡಬಿದ್ದು ನಮಸ್ಕರಿಸಿದ ಕ್ಷಣ ಗಮನ ಸೆಳೆಯಿತು. ಬಳಿಕ ವೀರ ಗಂಗಾಧರ ಅಜ್ಜನವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಆಶೀರ್ವಾದ ಕೋರಿದರು.
ಉಪ ಮುಖ್ಯಮಂತ್ರಿಯಾಗಿ ಡಾ.ಜಿ.ಪರಮೇಶ್ವರ್ ಅವರು ಅಂಬೇಡ್ಕರ್ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದರು.

















