ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ಇಂದು ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶಗಳನ್ನು 10 ಗಂಟೆಗೆ ಪ್ರಕಟಿಸಿದೆ ಮತ್ತು ಫಲಿತಾಂಶ ಲಿಂಕ್ ಬೆಳಿಗ್ಗೆ 11 ಗಂಟೆಗೆ ಸಕ್ರಿಯವಾಗುತ್ತದೆ. ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ತಮ್ಮ ಫಲಿತಾಂಶಗಳನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಪರಿಶೀಲಿಸಲು ಸಾಧ್ಯವಾಗುತ್ತದೆ.
ವೆಬ್ ಸೈಟ್ ಲಿಂಕ್: karresults.nic.in
ಎಂದಿನಂತೆ ಈ ಬಾರಿಯೂ ಹೆಣ್ಣುಮಕ್ಕಳು ಗಂಡುಮಕ್ಕಳಿಗಿಂತ ಉತ್ತಮ ಸಾಧನೆ ಮಾಡಿದ್ದಾರೆ. ಈ ವರ್ಷ ಶೇಕಡಾ 80.25 ರಷ್ಟು ವಿದ್ಯಾರ್ಥಿನಿಯರು ಉತ್ತೀರ್ಣರಾಗಿದ್ದರೆ, ಶೇಕಡಾ 69.05 ರಷ್ಟು ವಿದ್ಯಾರ್ಥಿಗಳು ಮಾತ್ರ ಉತ್ತೀರ್ಣರಾಗಿದ್ದಾರೆ.
ಪರೀಕ್ಷೆ ಹಾಜರಾದ ವಿದ್ಯಾರ್ಥಿಗಳಲ್ಲಿ ಶೇ 74.64 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕಲಾ ವಿಭಾಗದಲ್ಲಿ 61.22 ಶೇ ವಿದ್ಯಾರ್ಥಿಗಳು, ವಿಜ್ಞಾನ ವಿಭಾಗದಲ್ಲಿ ಶೇ.85.71 ವಿದ್ಯಾರ್ಥಿಗಳು, ವಾಣಿಜ್ಯ ವಿಭಾಗದಲ್ಲಿ ಶೇ.75.89 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ಕರ್ನಾಟಕ ದ್ವಿತೀಯ ಪಿಯು ಫಲಿತಾಂಶದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಶೇ 95.33 ಉತ್ತೀರ್ಣ ಫಲಿತಾಂಶದೊಂದಿಗೆ ಅಗ್ರಸ್ಥಾನದಲ್ಲಿದ್ದು, ಉಡುಪಿ ಶೇ 95.24 ಫಲಿತಾಂಶ ಪಡೆದಿದೆ. ಯಾದಗಿರಿ ಶೇ.62.98 ಅಂಕಗಳೊಂದಿಗೆ ಕೊನೆಯ ಸ್ಥಾನದಲ್ಲಿದೆ.
ಈ ಬಾರಿ ಒಂದು ಬದಲಾವಣೆ ಮಾಡಲಾಗಿದ್ದು, ಮರು ಮೌಲ್ಯಮಾಪನದಲ್ಲಿ ಕನಿಷ್ಠ ಒಂದು ಮಾರ್ಕ್ ಬದಲಾವಣೆಯಾದರೂ ಅದನ್ನು ಮಾರ್ಕ್ ಕಾರ್ಡ್ ನಲ್ಲಿ ಅಳವಡಿಸಲಾಗುವುದು.
ಈ ವರ್ಷ 5716 ಕಾಲೇಜುಗಳಿಂದ 7.27 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ವರದಿಗಳ ಪ್ರಕಾರ, ವಿಜ್ಞಾನ ವಿಭಾಗದಲ್ಲಿ ಒಟ್ಟು 2,44,129 ವಿದ್ಯಾರ್ಥಿಗಳು, ವಾಣಿಜ್ಯ ವಿಭಾಗದಲ್ಲಿ 2,47,269 ಮತ್ತು ಕಲಾ ವಿಭಾಗದಿಂದ 2,34,815 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು.
ಮೊದಲ ರ‍್ಯಾಂಕ್ ಪಡೆದ ವಿದ್ಯಾರ್ಥಿಗಳು
ಕಲಾ : ತಬಸುಮ್ ಶೇಕ್, ಜಯನಗರ ಬೆಂಗಳೂರು
ವಾಣಿಜ್ಯ: ಅನನ್ಯಾ, ಆಳ್ವಾಸ್ ಕಾಲೇಜು ಮೂಡಬಿದಿರೆ
ವಾಣಿಜ್ಯ: ಕೌಶಿಕ್