ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಇದರ ವತಿಯಿಂದ ಮೀನುಗಾರಿಕೆ ಮತ್ತು ಬಂದರು ಸಚಿವ ಅಂಗಾರ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರಿಗೆ ಶನಿವಾರ ಅಭಿನಂದನಾ ಸಮಾರಂಭ ಆಯೋಜಿಸಲಾಯಿತು.
ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಎಂ.ಎನ್. ರಾಜೇಂದ್ರ ಕುಮಾರ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಯಾಗಿ ದಕ್ಷಿಣ ಕನ್ನಡ ಮತ್ತು ಉಡುಪಿ ಸಹಕಾರಿ ಮೀನು ಮಾರಾಟ ಫೆಡರೇಷನ್ ಅಧ್ಯಕ್ಷ ಯಶ್ ಪಾಲ್ ಸುವರ್ಣ ಭಾಗವಹಿಸಿದ್ದರು.












