udupixpress
Home Trending ಡ್ರಗ್ಸ್ ದಂಧೆ: ಮಂಗಳೂರಿನ ಡ್ಯಾನ್ಸರ್ ಕಿಶೋರ್ ಶೆಟ್ಟಿ, ಅಕಿಲ್ ನೌಶೀಲ್ ಏಳು ದಿನ ಪೊಲೀಸ್ ಕಸ್ಟಡಿಗೆ

ಡ್ರಗ್ಸ್ ದಂಧೆ: ಮಂಗಳೂರಿನ ಡ್ಯಾನ್ಸರ್ ಕಿಶೋರ್ ಶೆಟ್ಟಿ, ಅಕಿಲ್ ನೌಶೀಲ್ ಏಳು ದಿನ ಪೊಲೀಸ್ ಕಸ್ಟಡಿಗೆ

ಮಂಗಳೂರು: ಡ್ರಗ್ಸ್ ದಂಧೆಯ ಆರೋಪದಡಿ ಸಿಸಿಬಿ ಪೊಲೀಸರಿಂದ ಬಂಧಿಸಲ್ಪಟ್ಟಿದ್ದ ಮಂಗಳೂರಿನ ಡ್ಯಾನ್ಸರ್ ಕಿಶೋರ್ ಅಮನ್ ಶೆಟ್ಟಿ  (30) ಮತ್ತು ಅಕಿಲ್ ನೌಶೀಲ್ (28) ರನ್ನು ನ್ಯಾಯಾಲಯ ಏಳು ದಿನಗಳ ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ನೀಡಿದೆ.

ಭಾನುವಾರ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ ನಂತರ  ಪೊಲೀಸರು ವಶಕ್ಕೆ ತೆಗೆದುಕೊಂಡರು. ಇಬ್ಬರನ್ನೂ ಭಾನುವಾರ ಕೊರೋನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಸೋಮವಾರ ಫಲಿತಾಂಶ ನಿರೀಕ್ಷಿಸಲಾಗಿದೆ.

ಫಲಿತಾಂಶವನ್ನು ಪಡೆಯುವವರೆಗೆ, ಪೊಲೀಸ್ ಸಿಬ್ಬಂದಿಗೆ ಪೂರ್ಣ ಪ್ರಮಾಣದಲ್ಲಿ ವಿಚಾರಣೆಯನ್ನು ಪುನರಾರಂಭಿಸಲು ಸಾಧ್ಯವಾಗುವುದಿಲ್ಲ. ಫಲಿತಾಂಶವು  ನೆಗೆಟಿವ್ ಆಗಿದ್ದರೆ ಅವರು ತಮ್ಮ ವಿಚಾರಣೆಯನ್ನು ಪ್ರಾರಂಭಿಸಬಹುದು. ಪಾಸಿಟಿವ್ ವರದಿ ಬಂದರೆ ಸರ್ಕಾರದ ಮಾನದಂಡಗಳ ಪ್ರಕಾರ ಚಿಕಿತ್ಸೆಯನ್ನು ಒದಗಿಸಬೇಕಾಗುತ್ತದೆ.

ಪ್ರಾಥಮಿಕ ವಿಚಾರಣೆಯಲ್ಲಿ ಕಿಶೋರ್ ಹಾಗೂ ಅಕಿಲ್ ಮಾದಕ ವಸ್ತು ಬಳಕೆ, ಸಾಗಾಟದ ತಪ್ಪೊಪ್ಪಿಕೊಂಡಿದ್ದಾರೆ. ಅಲ್ಲದೆ ತಮ್ಮ ಜೊತೆ ಸಂಪರ್ಕದಲ್ಲಿರುವ ನಟ ನಟಿಯರ ಬಗ್ಗೆಯೂ ಬಾಯಿಬಿಟ್ಟಿದ್ದರು ಎನ್ನಲಾಗಿದೆ. ವಶಕ್ಕೆ ಪಡೆದಿರುವ ಪೊಲೀಸರು ಆರೋಪಿಗಳಿಂದ ಇನ್ನಷ್ಟು ಮಾಹಿತಿ ಕಲೆಹಾಕುವ ಸಾಧ್ಯತೆ ಇದೆ.