ಉಡುಪಿ: ಕೋವಿಡ್ 19 ನಿಂದ ಸಂಕಷ್ಟಕ್ಕೆ ಒಳಗಾದ ಕಾರ್ಕಳ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯ ಸಂತ್ರಸ್ತರಿಗೆ ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ವತಿಯಿಂದ 1200 ಆಹಾರ ಕಿಟ್ ವಿತರಣೆ ಮಾಡಲಾಗಿದೆ.
ಇಂದು ಮಂದಾರ್ತಿಯ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಧಾರ್ಮಿಕ ದತ್ತಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಕಾರ್ಕಳ ಮತ್ತು ಹೆಬ್ರಿ ತಾಲ್ಲೂಕಿನ ತಹಶಿಲ್ದಾರರಿಗೆ ಕಿಟ್ ಗಳನ್ನು ಹಸ್ತಾಂತರಿಸಿದರು.
ದೇವಳದ ಮುಕ್ತೇಸರರಾದ ಧನಂಜಯ ಶೆಟ್ಟ ಇದ್ದರು.
 
								 
															





 
															 
															 
															












