ಬೆಂಗಳೂರು: ಗ್ರಾಮ ಪಂಚಾಯತ್ ಚುನಾವಣೆಗೆ ಕೊನೆಗೂ ಮುಹೂರ್ತ ಫಿಕ್ಸ್ ಆಗಿದ್ದು, ಡಿಸೆಂಬರ್ 22 ಹಾಗೂ 27ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಡಿಸೆಂಬರ್ 30 ಗ್ರಾಪಂ ಚುನಾವಣೆಯ ಫಲಿತಾಂಶ ಪ್ರಕಟವಾಗಲಿದೆ.
ಇಂದು ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ರಾಜ್ಯ ಚುನಾವಣಾ ಆಯೋಗ ಮಾಹಿತಿ ನೀಡಿದೆ.
ಚುನಾವಣೆ ಕೋವಿಡ್ ನಿಯಾಮವಳಿಯಂತೆ ನಡೆಯಲಿದೆ. ಒಟ್ಟು 5,762 ಗ್ರಾಪಂಗಳಿಗೆ ಚುನಾವಣೆ ನಡೆಯಲಿದ್ದು, ಬೆಳಿಗ್ಗೆ 7ರಿಂದ ಸಂಜೆ 5ಗಂಟೆಯವರೆಗೆ ಚುನಾವಣೆ ನಡೆಯಲಿದೆ.
ಕೆಲವು ಕಡೆ ಮತದಾನಕ್ಕೆ ಇವಿಎಂ ಬಳಸಲಾಗುತ್ತದೆ. ಉಳಿದ ಕಡೆಗಳಲ್ಲಿ ಬ್ಯಾಲೆಟ್ ಪೇಪರ್ ನಲ್ಲಿ ಮತದಾನ ನಡೆಯಲಿದೆ. ರಾಜ್ಯದಲ್ಲಿ ತಕ್ಷಣದಿಂದಲೇ ನೀತಿಸಂಹಿತೆ ಜಾರಿಯಾಗಲಿದೆ.

















