ಉಡುಪಿ: ಕೋವಿಡ್ 19 ಹಿನ್ನೆಲೆಯಲ್ಲಿ ಸಾರ್ವಜನಿಕವಾಗಿ ಗಣೇಶನ ವಿಗ್ರಹವಿಟ್ಟು ಗಣೇಶೋತ್ಸವ ಆಚರಣೆಗೆ ಅನುಮತಿ ನೀಡುವ ಅಧಿಕಾರವನ್ನು ಆಯಾಯ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ನೀಡಲಾಗಿದೆ ಎಂದು ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರು ತಿಳಿಸಿದ್ದಾರೆ.
ಗೌರಿ ಗಣೇಶ ಹಬ್ಬದ ಪ್ರಯುಕ್ತ ಭಕ್ತಾಧಿಗಳು ಸಾರ್ವಜನಿಕ ಸ್ಥಳದಲ್ಲಿ ಗಣೇಶನ ಮೂರ್ತಿಗಳನ್ನು ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸಲು ಅವಕಾಶ ನೀಡುವಂತೆ ಕೋರಿ ಮನವಿ ಸಲ್ಲಿಸಿದ್ದಾರೆ. ಆದ್ದರಿಂದ ಸಾರ್ವಜನಿಕವಾಗಿ ಸಭೆ, ಸಮಾರಂಭಗಳನ್ನು ಆಚರಿಸಲು ಕೇಂದ್ರ, ರಾಜ್ಯ ಸರ್ಕಾರ ಹಾಗೂ ಆರೋಗ್ಯ ಇಲಾಖೆ ಜಾರಿಗೊಳಿಸಿರುವ ಆದೇಶಗಳನ್ನು ಪರಿಶೀಲನೆ ನಡೆಸಿ, ಸಾರ್ವಜನಿಕ ಗಣೇಶ ಹಬ್ಬ ಆಚರಣೆಗೆ ಅನುಮತಿ ನೀಡಲು ಕ್ರಮಕೈಗೊಳ್ಳುವಂತೆ ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.












