ಮಂಗಳೂರು/ಉಡುಪಿ: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಸಂಭಾವ್ಯ ಅವಘಡಗಳನ್ನು ತಪ್ಪಿಸುವ ನಿಟ್ಟಿನಲ್ಲಿ ಕಟ್ಟೆಚ್ಚರ ವಹಿಸಲು ಉಭಯ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ.
ಶಿಕ್ಷಣ ಇಲಾಖಾಧಿಕಾರಿಗಳು ತಮ್ಮ ವ್ಯಾಪ್ತಿಯ ಶಾಲ ಮಕ್ಕಳ ಬಗ್ಗೆ ನಿಗಾ ವಹಿಸಿವಂತೆ ದ.ಕ ಜಿಲ್ಲಾಧಿಕಾರಿ ಡಾ.ಕೆ.ವಿ ರಾಜೇಂದ್ರ ಆದೇಶ ನೀಡಿದ್ದಾರೆ.
ಶಾಲೆಗೆ ಹಾಜರಾಗಲು ತೊಂದರೆಯಾಗುವಂತಹ ಪ್ರದೇಶಗಳಲ್ಲಿ ರಜೆ ಘೋಷಣೆ ಮಾಡಲಾಗಿದ್ದು, ಹಾಜರಾಗಿರುವ ವಿದ್ಯಾರ್ಥಿಗಳಿಗೆ ಪಾಠ ಮುಂದುವರಿಸಲು ಸೂಚಿಸಲಾಗಿದೆ.