ಉಡುಪಿ: ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳ ನಿರ್ವಹಣೆ ಕುರಿತಂತೆ ಪೂರ್ವಬಾವಿಯಾಗಿ ಕೈಗೊಂಡಿರುವ ಸಿದ್ದತೆಗಳ ಕುರಿತು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಅವರು ಬುಧವಾರ ಉಡುಪಿ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಆಸ್ಪತ್ರೆಯಲ್ಲಿನ ಆಕ್ಸಿಜಿನ್ ಘಟಕಗಳ ಕಾರ್ಯನಿರ್ವಹಣೆ, ಪೂರೈಕೆ, ವೆಂಟಿಲೇಟರ್ ಗಳ ಸುಸ್ಥಿತಿ ಹಾಗೂ ಕೋವಿಡ್ ಪರೀಕ್ಷಾ ಲ್ಯಾಬ್ನ ಸಮರ್ಪಕ ಕಾರ್ಯನಿರ್ವಹಣೆ ಬಗ್ಗೆ ಪರಿಶೀಲಿಸಿದರು.
ಜಿಲ್ಲಾ ಸರ್ಜನ್ ಡಾ.ಮಧುಸೂದನ್ ನಾಯಕ್ ಉಪಸ್ಥಿತರಿದ್ದರು.