ಉಡುಪಿ: ಕಾಪು ತಾಲೂಕಿನ ಬೆಳ್ಳೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಳ್ಳೆ ಗ್ರಾಮದ ಗೀತಾಮಂದಿರ ಇಲ್ಲಿ
ನವೆಂಬರ್ 19 ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮ ನಡೆಯಲಿದ್ದು, ಬೆಳ್ಳೆ ಗ್ರಾಮಕ್ಕೆ ಒಳಪಡುವ ಗ್ರಾಮಸ್ಥರು ತಮ್ಮ ಅಹವಾಲುಗಳನ್ನು ಮುಂಚಿತವಾಗಿ ಗ್ರಾಮದ ಗ್ರಾಮಕರಣಿಕರ ಕಚೇರಿಗೆ ನೀಡುವಂತೆ ಹಾಗೂ ಗ್ರಾಮಸ್ಥರು ಈ ಕಾರ್ಯಕ್ರಮದ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.