ಬೈಂದೂರು: ಜ. 21 ರಂದು ಕಿರಿಮಂಜೇಶ್ವರದಲ್ಲಿ ಜಿಲ್ಲಾಧಿಕಾರಿಗಳ ಗ್ರಾಮ ವಾಸ್ತವ್ಯ

ಉಡುಪಿ: ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ಕಾರ್ಯಕ್ರಮದ ಅಂಗವಾಗಿ ಜಿಲ್ಲಾಧಿಕಾರಿಗಳು ಜನವರಿ 21
ರಂದು ಬೆಳಗ್ಗೆ 11 ಗಂಟೆಗೆ ಬೈಂದೂರು ತಾಲೂಕು ಕಿರಿಮಂಜೇಶ್ವರ ಗ್ರಾಮದ ನಾಗೂರು ಒಡೆಯರ ಮಠ ಶ್ರೀ ಕೃಷ್ಣ ಲಲಿತ ಕಲಾಮಂದಿರದ ಇಲ್ಲಿ ಗ್ರಾಮ ವಾಸ್ತವ್ಯ ನಡೆಸಲಿದ್ದು, ಸದ್ರಿ ಗ್ರಾಮಕ್ಕೆ ಒಳಪಡುವ ಗ್ರಾಮಸ್ಥರು ತಮ್ಮ ಅಹವಾಲುಗಳನ್ನು ಮುಂಚಿತವಾಗಿ ಗ್ರಾಮದ ಗ್ರಾಮ ಕರಣಿಕರ ಕಚೇರಿಗೆ ನೀಡುವಂತೆ ಹಾಗೂ ಗ್ರಾಮಸ್ಥರು ಕಾರ್ಯಕ್ರಮದಲ್ಲಿ ಭಾಗವಹಿಸಿ, ಇದರ ಸದುಪಯೋಗಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.