ಬೆಂಗಳೂರು: ನ್ಯಾಯಬೆಲೆ ಅಂಗಡಿಗಳಲ್ಲಿನ ಸರ್ವರ್ ಸಮಸ್ಯೆಯಿಂದ ಪಡಿತರ ಚೀಟಿ ಇ-ಕೆವೈಸಿ ಮಾಡಿಸಲು ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಇ-ಕೆವೈಸಿ ಗಡುವನ್ನು ಅಕ್ಟೋಬರ್ 20, 2026ರವರೆಗೆ ವಿಸ್ತರಿಸಿದೆ.
ಈ ಹಿಂದೆ ಸೆಪ್ಟೆಂಬರ್ 30ರೊಳಗೆ ಇ-ಕೆವೈಸಿ ಪೂರ್ಣಗೊಳಿಸಲು ಗಡುವು ನೀಡಲಾಗಿತ್ತು. ಇದೀಗ ಎಪಿಎಲ್ ಮತ್ತು ಬಿಪಿಎಲ್ ಪಡಿತರ ಚೀಟಿದಾರರಿಗೆ ಹೆಚ್ಚುವರಿ ಕಾಲಾವಕಾಶ ನೀಡಲಾಗಿದೆ.
ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯಿಂದ ಜನರು ಪರದಾಡುತ್ತಿರುವ ವಿಚಾರ ಗಮನಕ್ಕೆ ಬಂದ ಹಿನ್ನೆಲೆಯಲ್ಲಿ ಗಡುವು ವಿಸ್ತರಿಸಲಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವ ರಿಜ್ವಾನ್ ಅರ್ಷದ್ ತಿಳಿಸಿದ್ದಾರೆ. ಸರ್ವರ್ ಸಮಸ್ಯೆಯನ್ನು ಶೀಘ್ರ ಬಗೆಹರಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದಿದ್ದಾರೆ.
ಶೀಘ್ರದಲ್ಲೇ ಮೊಬೈಲ್‌ನಲ್ಲೇ ಇ-ಕೆವೈಸಿ
ನ್ಯಾಯಬೆಲೆ ಅಂಗಡಿಗಳಿಗೆ ಜನರು ತೆರಳುವುದನ್ನು ಕಡಿಮೆ ಮಾಡಲು ಮೊಬೈಲ್ ಮೂಲಕ Face Authentication ಬಳಸಿ ಮನೆಯಲ್ಲೇ ಇ-ಕೆವೈಸಿ ಮಾಡಿಕೊಳ್ಳುವ ವ್ಯವಸ್ಥೆ ಅಭಿವೃದ್ಧಿಪಡಿಸಲಾಗುತ್ತಿದೆ. ಇನ್ನೊಂದು ವಾರದೊಳಗೆ ಈ ಮೊಬೈಲ್ ಅಪ್ಲಿಕೇಶನ್ ಸಾರ್ವಜನಿಕರ ಬಳಕೆಗೆ ಲಭ್ಯವಾಗುವ ನಿರೀಕ್ಷೆಯಿದೆ.
ಇ-ಕೆವೈಸಿಗೆ ಬೇಕಾಗುವ ದಾಖಲೆಗಳು
- ಕುಟುಂಬದ ಸದಸ್ಯರ ಮೂಲ ಆಧಾರ್ ಕಾರ್ಡ್
- ಪಡಿತರ ಚೀಟಿ ಅಥವಾ ರೇಷನ್ ಕಾರ್ಡ್ ಸಂಖ್ಯೆ
- ಆಧಾರ್‌ಗೆ ಲಿಂಕ್ ಆಗಿರುವ ಸಕ್ರಿಯ ಮೊಬೈಲ್ ಸಂಖ್ಯೆ
- ಆಧಾರ್‌ಗೆ ಲಿಂಕ್ ಆಗಿರುವ LPG ಗ್ಯಾಸ್ ಸಂಪರ್ಕದ ದಾಖಲೆ
- ಜಾತಿ ಪ್ರಮಾಣಪತ್ರ – SC/ST ಫಲಾನುಭವಿಗಳಿಗೆ ಅಗತ್ಯವಿದ್ದಲ್ಲಿ















