ನವದೆಹಲಿ: ಒಡಿಶಾದ ಬಾಲಸೋರ್‌ನಲ್ಲಿ ನಿನ್ನೆ ಸಂಜೆ ಭೀಕರ ಅಫಘಾತದಲ್ಲಿ ಮೂರು ರೈಲುಗಳು ಪರಸ್ಪರ ಡಿಕ್ಕಿಯಾಗಿ ಕನಿಷ್ಠ 233 ಜನರು ಸಾವನ್ನಪ್ಪಿದ್ದಾರೆ ಮತ್ತು 900 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂಡು ವರದಿಯಾಗಿದೆ.
ಕೋರಮಂಡಲ್ ಶಾಲಿಮಾರ್ ಎಕ್ಸ್‌ಪ್ರೆಸ್ ಎಂಬ ಪ್ಯಾಸೆಂಜರ್ ರೈಲು ಹಳಿತಪ್ಪಿ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದು, ಯಶವಂತಪುರ-ಹೌರಾ ಸೂಪರ್‌ಫಾಸ್ಟ್ ಎಂಬ ಮತ್ತೊಂದು ರೈಲು ಹಳಿತಪ್ಪಿದ ಕೋಚ್‌ಗಳಿಗೆ ಡಿಕ್ಕಿ ಹೊಡೆದು ಈ ಘಟನೆ ನಡೆದಿದೆ. ಮೃತರ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದ್ದು, ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ಎರಡು ಚಲಿಸುತ್ತಿದ್ದ ಪ್ಯಾಸೆಂಜರ್ ರೈಲುಗಳು ಮತ್ತು ಒಂದು ಸ್ಥಳದಲ್ಲಿ ನಿಲ್ಲಿಸಲಾಗಿದ್ದ ಗೂಡ್ಸ್ ರೈಲು ಕೂಡ ಅಪಘಾತಕ್ಕೆ ಒಳಗಾಗಿದೆ ಎಂದು ಭಾರತೀಯ ರೈಲ್ವೆಯ ಕಾರ್ಯನಿರ್ವಾಹಕ ನಿರ್ದೇಶಕ ಅಮಿತಾಭ್ ಶರ್ಮಾ ತಿಳಿಸಿದ್ದಾರೆ.
ರಾತ್ರಿ 7 ಗಂಟೆ ಸುಮಾರಿಗೆ ಅನೇಕ ಪ್ರಯಾಣಿಕರು ಮಲಗಿದ್ದಾಗ ಅತ್ಯಂತ ಭೀಕರ ರೈಲು ಅಪಘಾತ ಸಂಭವಿಸಿದೆ.
ಚೆನ್ನೈಗೆ ತೆರಳುತ್ತಿದ್ದ ಕೋರಮಂಡಲ್ ಶಾಲಿಮಾರ್ ಎಕ್ಸ್‌ಪ್ರೆಸ್ ಹಳಿತಪ್ಪಿ ಗೂಡ್ಸ್ ರೈಲಿಗೆ ಢಿಕ್ಕಿ ಹೊಡೆದಿದ್ದು, ನಂತರ ಹಲವು ಬೋಗಿಗಳು ಪಲ್ಟಿಯಾಗಿದೆ. ನಂತರ ಯಶವಂತಪುರ-ಹೌರಾ ಸೂಪರ್‌ಫಾಸ್ಟ್ ಹಳಿತಪ್ಪಿದ ಬೋಗಿಗಳಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಸಂಭವಿಸಿದಾಗ ಎರಡೂ ರೈಲುಗಳು ಅತಿವೇಗದಲ್ಲಿ ಚಲಿಸುತ್ತಿದ್ದವು.
ಸಂಭವನೀಯ ಕಾರ್ಯಾಚರಣೆಯ ವೈಫಲ್ಯದ ಬಗ್ಗೆ ರೈಲ್ವೆ ಇಲಾಖೆ ತನಿಖೆಗೆ ಆದೇಶಿಸಿದೆ.
ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಸ್ಥಳಕ್ಕೆ ಧಾವಿಸಿದ್ದಾರೆ. ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿರುವ ಅವರು ಭುವನೇಶ್ವರ ಮತ್ತು ಕೋಲ್ಕತ್ತಾದಿಂದ ರಕ್ಷಣಾ ತಂಡಗಳನ್ನು ಸಜ್ಜುಗೊಳಿಸಲಾಗಿದೆ ಎಂದಿದ್ದಾರೆ. ಎನ್.ಡಿ.ಆರ್.ಎಫ್ ರಾಜ್ಯ ಸರ್ಕಾರದ ರಕ್ಷಣಾ ತಂಡಗಳು ಮತ್ತು ವಾಯುಪಡೆಗಳನ್ನು ಕೂಡಾ ಸಜ್ಜುಗೊಳಿಸಲಾಗಿದ್ದು, ಎಲ್ಲಾ ರೀತಿಯ ರಕ್ಷಣಾ ಕಾರ್ಯಾಚರಣೆಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
ಶುಕ್ರವಾರ ರಾತ್ರಿಯಿಂದಲೇ ರಕ್ಷಣಾ ಕಾರ್ಯಗಳು ಸಮರೋಪಾದಿಯಲ್ಲಿ ನಡೆಯುತ್ತಿದೆ. ಗಾಯಾಳುಗಳಿಗೆ ರಕ್ತ ನೀಡಲು ಜನರು ಆಸ್ಪತ್ರೆಗಳತ್ತ ಧಾವಿಸಿರುವ ಚಿತ್ರಗಳು ಕಂಡುಬಂದಿವೆ. ತುರ್ತು ನಿಯಂತ್ರಣ ಕೊಠಡಿ ದೂರವಾಣಿ ಸಂಖ್ಯೆಗಳು ಇಂತಿವೆ