ಪತ್ರಕರ್ತ ಪವನ್ ಹೆತ್ತೂರು ಕೊರೊನಾ ಸೋಂಕಿಗೆ ಬಲಿ

ಮೈಸೂರು: ಪ್ರಜಾವಾಣಿ ಪತ್ರಿಕೆಯ ಮೈಸೂರು ಬ್ಯೂರೋದಲ್ಲಿ ವರದಿಗಾರನಾಗಿದ್ದ ಪವನ್ ಹೆತ್ತೂರು (35) ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದಾರೆ.

ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಶನಿವಾರ ಮಧ್ಯರಾತ್ರಿ ಕೊನೆಯುಸಿರೆಳೆದರು.

ಪವನ್‌ ಹೆತ್ತೂರು ಪ್ರಜಾವಾಣಿ ಸೇರಿದಂತೆ ವಿಜಯವಾಣಿ, ಕಸ್ತೂರಿ ಟಿವಿಯಲ್ಲಿ ಕೆಲಸ ಮಾಡಿದ್ದರು. ಅವರು ಪತ್ನಿ, ಇಬ್ಬರು ಚಿಕ್ಕ ಮಕ್ಕಳನ್ನು ಅಗಲಿದ್ದಾರೆ.