ಬಾಲಿವುಡ್ ನಟ ಸಲ್ಮಾನ್ ಖಾನ್’ಗೆ ಕೊಲೆ ಬೆದರಿಕೆ: ಓರ್ವನ ಬಂಧನ

ನವದೆಹಲಿ: ಬಾಲಿವುಡ್ ನಟ ಸಲ್ಮಾನ್ ಖಾನ್’ಗೆ ಕೊಲೆ ಬೆದರಿಕೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.

21ರ ವಯಸ್ಸಿನ ಧಕದ್ ರಾಮ್ ಬಿಷ್ಣೋಯಿ ಬಂಧಿತ ವ್ಯಕ್ತಿ.ಈತ ರಾಜಸ್ಥಾನದ ಜೋದ್ ಪುರ್ ಬಳಿಯ ಸಿಯೋಗಿ ಕಿ ಧಾನಿ ನಿವಾಸಿ ಎಂದು ಹೇಳಲಾಗುತ್ತಿದೆ.

ಮಾಧ್ಯಮವೊಂದರ ಸಂದರ್ಶನದಲ್ಲಿ ಮಾತನಾಡಿರುವ ಲಾರೆನ್ಸ್ ಬಿಷ್ಣೋಯ್ ‘ನನ್ನ ಜೀವನದ ಅಂತಿಮ ಗುರಿ ಅಂತಿದ್ದರೆ ಅದು ನಟ ಸಲ್ಮಾನ್ ಖಾನ್ ಅವರನ್ನು ಕೊಲ್ಲುವುದೇ ಆಗಿದೆ. ಸಲ್ಮಾನ್ ಖಾನ್ ಬಿಷ್ಣೋಯ್ ಸಮುದಾಯಕ್ಕೆ ಕ್ಷಮೆಯಾಚಿಸಿದ ನಂತರವೇ ಈ ದ್ವೇಷ ಕೊನೆಗೊಳ್ಳುತ್ತದೆ’ ಎಂದು ಮಾತನಾಡಿದ್ದಾನೆ.