ಮಂಗಳೂರು: ವಿಶ್ವ ಹಿಂದೂ ಪರಿಷತ್ ನ ಅಂತರಾಷ್ಟ್ರೀಯ ಬೈಠಕ್ ಮಂಗಳೂರಿನ ಸಂಘನಿಕೇತನದಲ್ಲಿ ಡಿ.25 ರಿಂದ 30 ವರೆಗೆ ನಡೆಯಲಿದೆ ಅಂತ ವಿಶ್ವಹಿಂದೂ ಪರಿಷತ್ ನ ಕರ್ನಾಟಕ ಕಾರ್ಯಾಧ್ಯಕ್ಷ ಪ್ರೊ. ಎಂ. ಬಿ. ಪುರಾಣಿಕ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.
ಅಯೋಧ್ಯೆ ತೀರ್ಪು ಬಳಿಕ ಮೊದಲ ಬಾರಿಗೆ ನಡೆಯುವ ವಿಹಿಂಪ ಕೇಂದ್ರೀಯ ವಿಶ್ವಸ್ಥ ಮಂಡಳಿ ಮತ್ತು ಅಂತರಾಷ್ಟ್ರೀಯ ಸಮಿತಿ ಬೈಠಕ್ ನಲ್ಲಿ ಪ್ರಮುಖವಾಗಿ ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ಮಂದಿರದ ನಿರ್ಮಾಣ ಮತ್ತು ಮುಂದಿನ ವರ್ಷದ ಯೋಜನೆಗಳನ್ನು ನಿರ್ಧರಿಸಲಾಗುತ್ತದೆ ಎಂದರು.
ಬೈಠಕ್ ನಲ್ಲಿ 32 ದೇಶಗಳ 350ಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗವಹಿಸಲಿದ್ದಾರೆ. ಆರ್ ಎಸ್ ಎಸ್ ಸಹಕಾರ್ಯವಾಹ ಸುರೇಶ್ ಭಯ್ಯಾಜಿ ಜೋಷಿ , ವಿಹಿಂಪ ಅಂತರಾಷ್ಟ್ರೀಯ ಅಧ್ಯಕ್ಷರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.
ಗೋಷ್ಠಿಯಲ್ಲಿ ವಿಹಿಂಪ ಕರ್ನಾಟಕ ಪ್ರಾಂತ ಸಹಕಾರ್ಯದರ್ಶಿ ಶಿವಾನಂದ್ ಮೆಂಡನ್, ಮಂಗಳೂರು ವಿಭಾಗ ಕಾರ್ಯದರ್ಶಿ ಶರಣ್ ಪಂಪ್ ವೆಲ್, ಅಧ್ಯಕ್ಷ ಗೋಪಾಲ್ ಕುತ್ತಾರ್, ಕಾರ್ಯದರ್ಶಿ ಶಿವಾನಂದ ಮೆಂಡನ್ ಉಪಸ್ಥಿತರಿದ್ದರು.












