ಉಡುಪಿ: ಜಿಲ್ಲೆಯಲ್ಲಿ ಸುಮಾರು 68 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಡೀಮ್ಡ್ ಫಾರೆಸ್ಟ್ ಸಮಸ್ಯೆ ಇದೆ. ಡೀಮ್ಡ್ ಫಾರೆಸ್ಟ್ ವ್ಯಾಪ್ತಿಯಿಂದ ಕೈಬಿಡಬಹುದಾದ ಅರಣ್ಯ ಪ್ರದೇಶದ ಬಗ್ಗೆ ವಿಧಾನಸಭಾವಾರು ಮಾಹಿತಿ ತರಿಸಿಕೊಂಡು ಮೂರ್ನಾಲ್ಕು ತಿಂಗಳೊಳಗೆ ಸಮಸ್ಯೆಯನ್ನು ಇತ್ಯರ್ಥ ಪಡಿಸಲಾಗುವುದು ಎಂದು ಅರಣ್ಯ ಸಚಿವ ಅರವಿಂದ ಲಿಂಬಾವಳಿ ಹೇಳಿದರು.
ಶನಿವಾರ ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯ ಬಳಿಕ ಮಾಧ್ಯಮಗಳಿಗೆ ಮಾಹಿತಿ ನೀಡಿದರು.
ರಾಜ್ಯದಲ್ಲಿರುವ ಕುಮ್ಕಿ ಹಾಗೂ ಬಾಣ ಜಮೀನು ಹಂಚಿಕೆ ಸಂಬಂಧ ರಾಜ್ಯಮಟ್ಟದಲ್ಲಿ ಅರಣ್ಯ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳ ಸಭೆ ನಡೆಸಿ ಸಮಸ್ಯೆಯನ್ನು ಇತ್ಯರ್ಥಗೊಳಿಸಲಾಗುವುದು ಎಂದು ಭರವಸೆ ನೀಡಿದರು.