ಕಾಂಗ್ರೆಸ್ ನ ಅವಿಶ್ವಾಸ ನಿರ್ಣಯಕ್ಕೆ ಸೋಲು: ಮುಖ್ಯಮಂತ್ರಿ ಯಡಿಯೂರಪ್ಪ ಸರ್ಕಾರ ಸೇಫ್

ಬೆಂಗಳೂರು: ಕಾಂಗ್ರೆಸ್ ಪಕ್ಷವು ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಶನಿವಾರ ವಿಧಾನಸಭೆಯಲ್ಲಿ ಮಂಡಿಸಿದ ಅವಿಶ್ವಾಸ ನಿರ್ಣಯಕ್ಕೆ ಸೋಲಾಗಿದೆ. ಇದರಿಂದ ಪ್ರತಿಪಕ್ಷ ಕಾಂಗ್ರೆಸ್ ನಾಯಕರು ಮುಖಭಂಗ ಅನುಭವಿಸಿದ್ದಾರೆ.

ಶಾಸಕರ ವಿಶ್ವಾಸ ಗಳಿಸುವಲ್ಲಿ ಸಿಎಂ ಬಿಎಸ್ ವೈ ಯಶಸ್ವಿಯಾಗಿದ್ದು, ಶಾಸಕರು ಧ್ವನಿ ಮತದ ಮೂಲಕ ಸಿಎಂ ಪರ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇದರಿಂದ ಕಾಂಗ್ರೆಸ್ ಮಂಡಿಸಿದ ಅವಿಶ್ವಾಸ ನಿರ್ಣಯಕ್ಕೆ ಸೋಲು ಉಂಟಾಗಿದ್ದು, ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಗೆಲುವು ಸಾಧಿಸಿದೆ. ಬಳಿಕ ಸ್ಪೀಕರ್ ವಿಧಾನಸಭೆ ಕಲಾಪವನ್ನು ಅನಿರ್ದಿಷ್ಟಾವಧಿಗೆ ಮುಂದೂಡಿದರು.