ಬೆಂಗಳೂರು: ಪದವಿ ಕಾಲೇಜುಗಳನ್ನು ಆರಂಭಿಸುವ ಕುರಿತಂತೆ ಯುಜಿಸಿಯಿಂದ ಮಾರ್ಗಸೂಚಿ ಬಂದಿದ್ದು, ಈ ಬಗ್ಗೆ ಶೀಘ್ರದಲ್ಲೇ ರಾಜ್ಯ ಸರ್ಕಾರ ಸೂಕ್ತ ತೀರ್ಮಾನ ಕೈಗೊಳ್ಳಲಿದೆ ಎಂದು ಡಿಸಿಎಂ ಡಾ. ಅಶ್ವತ್ಥ್ ನಾರಾಯಣ್ ಹೇಳಿದ್ದಾರೆ.
ಪ್ರಸ್ತುತ ಕಾಲೇಜು ವಿದ್ಯಾರ್ಥಿಗಳ ಆನ್ ಲೈನ್ ತರಗತಿಗಳು ನಡೆಯುತ್ತಿದ್ದು, ಇದು ಹೀಗೆಯೇ ಮುಂದುವರೆಯಲಿದೆ. ಸ್ಪಷ್ಟ ನಿರ್ಧಾರಕ್ಕೆ ಬರುವವರೆಗೆ ಕಾಲೇಜುಗಳ ತರಗತಿ ಆರಂಭ ಮಾಡುವುದಿಲ್ಲ ಎಂದು ತಿಳಿಸಿದ್ದಾರೆ.












