ಉಡುಪಿಯಲ್ಲಿ ಭಾರೀ ಮಳೆ: ಅಂತಿಮ ವರ್ಷದ ಪದವಿ ಪರೀಕ್ಷೆ ಮುಂದೂಡಿಕೆ

ಉಡುಪಿ: ಜಿಲ್ಲೆಯಲ್ಲಿ ಧಾರಾಕಾರ ಮಳೆ ಮುಂದುವರಿದ ಹಿನ್ನೆಲೆಯಲ್ಲಿ ನಾಳೆ (ಸೆ. 21) ನಡೆಯಬೇಕಿದ್ದ ಮಂಗಳೂರು ವಿವಿಯ ಅಂತಿಮ ವರ್ಷದ ಪದವಿ ಪರೀಕ್ಷೆಯನ್ನು ಮುಂದೂಡಿಕೆ ಮಾಡಿ ಸರ್ಕಾರ ಆದೇಶ ನೀಡಿದೆ.
ನೆರೆ ಪರಿಸ್ಥಿತಿ ಇರುವುದರಿಂದ ವಿದ್ಯಾರ್ಥಿಗಳಿಗೆ ಬರಲು ಕಷ್ಟ ಆಗಬಹುದು ಎಂಬ ಹಿನ್ನೆಲೆಯಲ್ಲಿ ಸರ್ಕಾರ ಪರೀಕ್ಷೆಯನ್ನು ಮುಂದೂಡಿಕೆ ಮಾಡಿದೆ.