ಇದೀಗ ಎಲ್ಲೆಲ್ಲೂ ಡೆಂಗ್ಯೂ ಜ್ವರದ ಸುದ್ದಿ ಕೇಳಿಸುತ್ತಿದೆ. ಡೆಂಗ್ಯೂ ಎಂದರೆ ಬೆಚ್ಚಿ ಬೀಳುವವರ ಸಂಖ್ಯೆ ಜಾಸ್ತಿಯಾಗಿದೆ. ಡೆಂಗ್ಯೂ ಜ್ವರ ಬರದಂತೆ ನಾವು ಮೊದಲೇ ಕೆಲವೊಂದು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡರೆ ಯಾವ ಜ್ವರಕ್ಕೂ ಹೆದರಬೇಕಿಲ್ಲ. ಇಲ್ಲಿದೆ ನೋಡಿ ಒಂದಷ್ಟು ಟಿಪ್ಸ್:
ಡೆಂಗ್ಯೂ ತಡೆಗಟ್ಟಲು ಏನು ಮಾಡಬೇಕು?
* ಶುದ್ಧ ಹಾಗೂ ಕುದಿಸಿ ಆರಿಸಿದ ನೀರನ್ನು ಕುಡಿಯಿರಿ
* ಹಗಲಿನಲ್ಲಿ ಸೊಳ್ಳೆ ಕಚ್ಚದಂತೆ ಎಚ್ಚರವಹಿಸಿ
* ನೀರು ಶೇಖರಣಾ ತೊಟ್ಟಿ, ಟ್ಯಾಂಕ್‌ಗಳ ಮುಚ್ಚಳವನ್ನು ಭದ್ರವಾಗಿ ಮುಚ್ಚಿಡಿ.
* ತೆಂಗಿನ ಚಿಪ್ಪು, ಟಯರ್ ನಂತಹ ತ್ಯಾಜ್ಯವನ್ನು ಸಮರ್ಪಕವಾಗಿ ವಿಲೇವಾರಿ ಮಾಡಿ.
* ತೊಟ್ಟಿ, ಬಿಂದಿಗೆ, ಡ್ರಮ್‌ಗಳಲ್ಲಿ 2-3 ದಿನಕ್ಕೊಮ್ಮೆ ನೀರು ಬದಲಿಸಿ ಸ್ವಚ್ಛಗೊಳಿಸಿ.
* ಪಾತ್ರೆ ಹಾಗೂ ಬಿಂದಿಗೆಗಳಲ್ಲಿ ಹೆಚ್ಚು ದಿನ ನೀರು ಸಂಗ್ರಹಿಸಿಡಬೇಡಿ * ಮನೆಯ ಸುತ್ತಲು ಹಾಗೂ ತಾರಸಿಯ ಮೇಲೆ ನೀರು ನಿಲ್ಲದಂತೆ ಎಚ್ಚರವಹಿಸಿ.
* ಸೊಳ್ಳೆಗಳನ್ನು ನಿಯಂತ್ರಿಸಲು ಬೇವಿನ ಸೊಪ್ಪಿನ ಹೊಗೆ ಹಾಕಬಹುದು.
*ಸೊಳ್ಳೆಗಳನ್ನು ತಡೆಯಲು ಕಿಟಕಿ ಬಾಗಿಲುಗಳಿಗೆ ಮೆಶ್ ಹಾಕಿ ಅಥವಾ ಸೊಳ್ಳೆ ನಾಶಕ ಔಷಧಗಳನ್ನು ಬಳಸಿ.
* ಸೀನುವಾಗ, ಕೆಮ್ಮುವಾಗ ಕರವಸ್ತ್ರಗಳನ್ನು ಅಡ್ಡಲಾಗಿ ಇಟ್ಟುಕೊಳ್ಳಿ.