ಉಡುಪಿ: ರಾಜ್ಯದ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವ ಕೋಟ ಶ್ರೀನಿವಾಸ ಪೂಜಾರಿ ಯವರು ಜನವರಿ 10 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದು, ಅಂದು 7.30 ರಿಂದ 9 ಗಂಟೆಯ ವರೆಗೆ ಕೋಟದ ಗೃಹ ಕಚೇರಿಯಲ್ಲಿ ಸಾರ್ವಜನಿಕರ ಭೇಟಿ ಮತ್ತು ಅಹವಾಲು ಸ್ವೀಕಾರ ಕಾರ್ಯಕ್ರಮ, 10 ಗಂಟೆಗೆ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಎಸ್.ಸಿ.ಎಸ್.ಪಿ. ಟಿ.ಎಸ್.ಪಿ ಇಲಾಖಾವಾರು ಪ್ರಗತಿ ಪರಿಶೀಲನಾ ಸಭೆ, ಮ. 12 ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಬೋವಿ ಜನಾಂಗದ ಜಾತಿ ಪ್ರಮಾಣ ಪತ್ರದ ಸಮಸ್ಯೆ ಕುರಿತು ಶಾಸಕರು ಹಾಗೂ ಅಧಿಕಾರಿಗಳೊಂದಿಗೆ ಸಭೆ, ಮ. 1 ರಿಂದ 2.30 ರ ವರೆಗೆ ಜಿಲ್ಲಾ ಪಂಚಾಯತ್‌ನಲ್ಲಿ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಲಿರುವರು.