ಗ್ಯಾಸ್ಟ್ರಿಕ್ ಸಮಸ್ಯೆಯಿಂದ ಮನನೊಂದು ಮಹಿಳೆ ನೇಣಿಗೆ ಶರಣು

ಬೈಂದೂರು: ಗ್ಯಾಸ್ಟ್ರಿಕ್  ಸಮಸ್ಯೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ಜೀವನದಲ್ಲಿ‌ ಮನನೊಂದು ಆತ್ಮಹತ್ಯೆಗೆ ಶರಣಾದ ಘಟನೆ ಬೈಂದೂರು ತಾಲೂಕಿನ ಯಡ್ತರೆ ಗ್ರಾಮದಲ್ಲಿ ಎ.29 ರಂದು ಸಂಜೆ ನಡೆದಿದೆ.

ಯಡ್ತರೆ ಗ್ರಾಮದ ನಿವಾಸಿ 36 ವರ್ಷದ ಶ್ರೀಲತಾ ಆತ್ಮಹತ್ಯೆಗೆ ಶರಣಾದ ಮಹಿಳೆ. ಇವರು ಗ್ಯಾಸ್ಟ್ರಿಕ್  ಸಮಸ್ಯೆಯಿಂದ ಬಳಲುತ್ತಿದ್ದು, ಇದಕ್ಕೆ ಚಿಕಿತ್ಸೆಯನ್ನು ಪಡೆದುಕೊಂಡಿದ್ದರು. ಆದರೆ, ಶ್ರೀಲತಾ ಅವರಿಗೆ ಆಗಾಗ ಹೊಟ್ಟೆ ನೋವು ಕಾಣಿಸಿಕೊಳ್ಳುತ್ತಿದ್ದು, ಇದರಿಂದ ಮನನೊಂದು ನಿನ್ನೆ ಸಂಜೆ ಫ್ಯಾನ್ ಗೆ ಚೂಡಿದಾರ್ ವೇಲ್ ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.