ದೇಶದ ಅಭಿವೃದ್ಧಿಗೆ ಇಂದಿರಾ ಕೊಡುಗೆ ಅಪಾರ: ಸಭಾಪತಿ

ಉಡುಪಿ: ದೇಶದ ಸಮಗ್ರ ಅಭಿವೃದ್ಧಿಗೆ ಇಂದಿರಾ ಗಾಂಧಿ ನೀಡಿದ ಕೊಡುಗೆ ಅಪಾರ. ಭೂ ಮಸೂದೆ ಕಾಯಿದೆ ಜಾರಿಗೊಳಿಸುವ ಮೂಲಕ ರೈತರಿಗೆ ಭೂಮಿ ಹಕ್ಕನ್ನು ನೀಡಿದ ಧೀಮಂತ ಮಹಿಳೆ ಎಂದು ಮಾಜಿ ಶಾಸಕ ಯು.ಆರ್‌. ಸಭಾಪತಿ ಹೇಳಿದರು.
ಉಡುಪಿ ಜಿಲ್ಲಾ ಕಾಂಗ್ರೆಸ್‌ ಸಮಿತಿ ಹಾಗೂ ಜಿಲ್ಲಾ ಕಿಸಾನ್‌ ಘಟಕದ ಜಂಟಿ ಆಶ್ರಯದಲ್ಲಿ ಕಾಂಗ್ರೆಸ್‌ ಭವನದಲ್ಲಿ ಮಂಗಳವಾರ ನಡೆದ ದಿವಂಗತ ಇಂದಿರಾ ಗಾಂಧಿಯವರ 102ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
20 ಅಂಶಗಳ ಕಾರ್ಯಕ್ರಮಗಳ ಮೂಲಕ ಬಡ ಕೃಷಿ ಕಾರ್ಮಿಕರಿಗೆ, ಮಹಿಳೆಯರಿಗೆ ಹಾಗೂ ಪರಿಶಿಷ್ಟ ಜಾತಿಯವರಿಗೆ ಸರ್ಕಾರದ ಸೌಲಭ್ಯಗಳನ್ನು ದೊರಕುವಂತೆ ಮಾಡಿದರು. ಬ್ಯಾಂಕ್‌ ರಾಷ್ಟ್ರೀಕರಣ, ಪಂಚ ವಾರ್ಷಿಕ ಯೋಜನೆಗಳ ಮೂಲಕ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ,‌ ಕೈಗಾರಿಕೆಗಳಿಗೆ ಉತ್ತೇಜನ ನೀಡುವಂತಹ ಕಾರ್ಯಕ್ರಮವನ್ನು ಹಮ್ಮಿಕೊಂಡು ದೇಶದ ಸಮಗ್ರ‌ ಬೆಳವಣಿಗೆಗೆ ಕಾರಣಿಕರ್ತರಾಗಿದ್ದರು ಎಂದರು.
ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಅಶೋಕ್‌ ಕುಮಾರ್‌ ಕೊಡವೂರು ಅಧ್ಯಕ್ಷತೆ ವಹಿಸಿದ್ದರು.
ಕಿಸಾನ್‌ ಘಟಕದ ಕುಂದಾಪುರ ಬ್ಲಾಕ್‌ ಅಧ್ಯಕ್ಷ ಭಾಸ್ಕರ್‌ ಶೆಟ್ಟಿ, ಸದಸ್ಯರಾದ ಬಿಪಿನ್‌ಚಂದ್ರ ಪಾಲ್‌, ಪಕ್ಷದ ಮುಖಂಡರಾದ ವೆರೋನಿಕಾ ಕರ್ನೇಲಿಯೋ, ಕಿಶನ್‌ ಹೆಗ್ಡೆ ಕೊಳ್ಕೆಬೈಲ್‌, ಬಿ. ನರಸಿಂಹ ಮೂರ್ತಿ, ಹರೀಶ್‌ ಕಿಣಿ, ಶಬ್ಬೀರ್‌ ಅಹ್ಮದ್‌, ಗೀತಾ ವಾಗ್ಳೆ, ಡಾ. ಸುನಿತಾ ಶೆಟ್ಟಿ, ರೋಶನಿ ಒಲಿವರ್‌, ಸತೀಶ್‌ ಅಮೀನ್‌ ಪಡುಕೆರೆ, ಶಂಕರ್‌ ಕುಂದರ್‌, ಉದ್ಯಾವರ ನಾಗೇಶ್‌ ಕುಮಾರ್‌, ಇಸ್ಮಾಯಿಲ್‌ ಆತ್ರಾಡಿ, ಸುನಿಲ್‌ ಬಂಗೇರಾ, ಚಂದ್ರಿಕಾ ಶೆಟ್ಟಿ, ಮಹಾಬಲ ಕುಂದರ್‌, ಭಾಸ್ಕರ್‌ರಾವ್‌ ಕಿದಿಯೂರು ಉಪಸ್ಥಿತರಿದ್ದರು.
ಜಿಲ್ಲಾ ಕಿಸಾನ್‌ ಘಟಕದ ಅಧ್ಯಕ್ಷ ಎಲ್ಲೂರು ಶಶಿಧರ ಶೆಟ್ಟಿ ಸ್ವಾಗತಿಸಿದರು. ಮಹಿಳಾ ಕಾಂಗ್ರೆಸ್‌ ಉಪಾಧ್ಯಕ್ಷೆ ಜ್ಯೋತಿ ಹೆಬ್ಬಾರ್‌ ಕಾರ್ಯಕ್ರಮ ನಿರೂಪಿಸಿದರು.