ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ

ಉಡುಪಿ: ಶಿರೂರು ರೈಲ್ವೆ ನಿಲ್ದಾಣದ ರೈಲ್ವೆ ಹಳಿಯ ಮೇಲೆ ಏಪ್ರಿಲ್ 3 ರಂದು ಸುಮಾರು 50 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿಯ ಮೃತದೇಹವು ಪತ್ತೆಯಾಗಿರುತ್ತದೆ.

ಮೃತರ ವಾರಿಸುದಾರರ ಯಾರಾದರೂ ಇದ್ದಲ್ಲಿ ಪೊಲೀಸ್ ಉಪ ನಿರೀಕ್ಷಕರು, ಬೈಂದೂರು ಪೊಲೀಸ್ ಠಾಣೆ ದೂ.ಸಂಖ್ಯೆ : 08254- 251033 ಅಥವಾ ಪೊಲೀಸ್ ವೃತ್ತ ನಿರೀಕ್ಷಕರು ಬೈಂದೂರು ವೃತ್ತ ದೂ.ಸಂಖ್ಯೆ: 08254- 251031 ಅನ್ನು ಸಂಪರ್ಕಿಸುವಂತೆ ಬೈಂದೂರು ಪೊಲೀಸ್ ಠಾಣೆಯ ಉಪನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.