ಡಿ.ದೇವರಾಜ ಅರಸು ವಿದೇಶಿ ವ್ಯಾಸಾಂಗ ವೇತನಕ್ಕೆ ಅರ್ಜಿ ಸಲ್ಲಿಸಿ

ಉಡುಪಿ : 2019-20 ನೇ ಸಾಲಿನಲ್ಲಿ ವಿದೇಶಿ ವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಪದವಿ/ ಪಿಎಚ್‍ಡಿ ವ್ಯಾಸಾಂಗ ಮಾಡುವ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಹಾಗೂ 3 ಬಿ ಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ನೀಡಲಾಗುವ ಡಿ.ದೇವರಾಜ ಅರಸು ವಿದೇಶಿ ವ್ಯಾಸಾಂಗ ವೇತನಕ್ಕೆ ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಅಕ್ಟೋಬರ್ 30 ಕೊನೆಯ ದಿನ. ಹೆಚ್ಚಿನ ವಿವರಗಳಿಗೆ ಇಲಾಖಾ ವೆಬ್‍ಸೈಟ್ ನೋಡಬಹುದು.

ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ: 0820-2574881 ಹಾಗೂ 0820-2573881 ನ್ನು ಸಂಪರ್ಕಿಸುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.