ಹಿಂದುಳಿದ ವರ್ಗಗಳ ಆಯೋಗದ ಮೂಲಕ ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಮನವಿ: ಯಶ್‍ಪಾಲ್ ಸುವರ್ಣ

ಉಡುಪಿ: ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷರಾದ ಡಾ ಲಕ್ಷ್ಮಣ್ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಕೆ. ಜಯಪ್ರಕಾಶ್ ಹೆಗ್ಡೆಯವರನ್ನು ಭೇಟಿಯಾಗಿ ಹಿಂದುಳಿದ ವರ್ಗಗಳ ಆಯೋಗದ ಮೂಲಕ ಹಿಂದುಳಿದ ವರ್ಗಗಳ ಸಮಗ್ರ ಅಭಿವೃದ್ಧಿಗೆ ವಿಶೇಷ ಕಾರ್ಯಯೋಜನೆ ರೂಪಿಸುವಂತೆ ಮನವಿ ಮಾಡಿರುವುದಾಗಿ ಬಿಜೆಪಿ ಹಿಂದುಳಿದ ವರ್ಗಗಳ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್‍ಪಾಲ್ ಸುವರ್ಣ ತಿಳಿಸಿದ್ದಾರೆ.

ಬೆಂಗಳೂರಿನ ಹಿಂದುಳಿದ ವರ್ಗಗಳ ಆಯೋಗದ ಕಚೇರಿಯಲ್ಲಿ ಆಯೋಗದ ಅಧ್ಯಕ್ಷರು ಮತ್ತು ಸದಸ್ಯರೊಂದಿಗೆ ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ ಬೇಡಿಕೆ, ಜ್ವಲಂತ ಸಮಸ್ಯೆಗಳು ಹಾಗೂ ಸರಕಾರದ ಯೋಜನೆಗಳ ಪರಿಣಾಮಕಾರಿ ಅನುಷ್ಠಾನದ ಬಗ್ಗೆ ಸಂವಾದ ನಡೆಸಿದ್ದು, ಈ ಸಂದರ್ಭದಲ್ಲಿ ಬಿಜೆಪಿ ಹಿಂದುಳಿದ ವರ್ಗಗಳ ರಾಜ್ಯಾಧ್ಯಕ್ಷ ನೆ.ಲ. ನರೇಂದ್ರ ಬಾಬು, ಆಯೋಗದ ಸದಸ್ಯರು ಉಪಸ್ಥಿತರಿದ್ದರು.