ಉಡುಪಿ: ಬಂಟಕಲ್ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಕೃತಕ ಬುದ್ಧಿಮತ್ತೆ ಮತ್ತು ದತ್ತಾಂಶ ವಿಜ್ಞಾನ ವಿಭಾಗದ ವಿದ್ಯಾರ್ಥಿನಿಯರಾದ ಪಲ್ಲವಿ ರಾಥೋಡ್, ಪೂಜಾ, ದೀಕ್ಷಾ ಹಾಗೂ ಅನುಶ್ವಿತ ಇವರು ವಿಭಾಗದ ಪ್ರಾಧ್ಯಾಪಕರಾದ ಡಾ. ಗಣೇಶ್ ಪ್ರಸಾದ್ ಇವರ ಮಾರ್ಗದರ್ಶನದಲ್ಲಿ ಕೃತಕ ಬುದ್ಧಿಮತ್ತೆ ಬಳಸಿ ಮೂತ್ರನಾಳದ ಸೋಂಕು ಪತ್ತೆ ಹಚ್ಚುವ ವ್ಯವಸ್ಥೆಯನ್ನು ಅಭಿವೃದ್ಧಿ ಪಡಿಸಿದ್ದಾರೆ.
ಈ ತಂಡವು 80,000 ಕ್ಕೂ ಹೆಚ್ಚು ರೋಗಿಗಳ ಮೂತ್ರದ ಪರೀಕ್ಷೆ ದಾಖಲೆಗಳನ್ನು ಒಳಗೊಂಡ ವಿಶಾಲ ದತ್ತಾಂಶವನ್ನು ಬಳಸಿಕೊಂಡು ಸುಧಾರಿತ ಯಂತ್ರಕಲಿಕೆ ವಿಧಾನದ ಮೂಲಕ ಮೂತ್ರನಾಳದ ಸೋಂಕನ್ನು ಅತ್ಯಂತ ನಿಖರವಾಗಿ ಪತ್ತೆ ಹಚ್ಚುವ ಸಾಮಥ್ರ್ಯವನ್ನು
ಹೊಂದಿದೆ. ಈ ವ್ಯವಸ್ಥೆಯಿಂದಾಗಿ ರೋಗಿಗಳಿಗೆ ವೈಯಕ್ತಿಕ ಆರೋಗ್ಯ ಮಾರ್ಗದರ್ಶನ, ಮುನ್ನೆಚ್ಚರಿಕೆ ಸಲಹೆಗಳು ಹಾಗೂ ಆರೋಗ್ಯ ಸಂಬಂಧಿತ ಮಾಹಿತಿಯನ್ನು ಒದಗಿಸುತ್ತದೆ.
ಈ ವ್ಯವಸ್ಥೆಯು ಗ್ರಾಮೀಣ ಪ್ರದೇಶದ ಜನರಿಗೆ ತ್ವರಿತ ಸುಲಭ ಹಾಗೂ ಪರಿಣಾಮಕಾರಿ ತಪಾಸಣೆ ಸೇವೆಯನ್ನು ಒದಗಿಸುವ ಉದ್ದೇಶವನ್ನು ಹೊಂದಿದ್ದು ಆರೋಗ್ಯ ಕ್ಷೇತ್ರದಲ್ಲಿ ಕೃತಕ ಬುದ್ಧಿಮತ್ತೆಯ ಬಳಕೆಯ ಮೂಲಕ ಆರಂಭಿಕ ಹಂತದಲ್ಲಿ ರೋಗ ಪತ್ತೆ ಹಾಗೂ
ಆರೋಗ್ಯ ಜಾಗೃತಿಯನ್ನು ಹೆಚ್ಚಿಸುವಲ್ಲಿ ಈ ಯೋಜನೆಯು ಮಹತ್ವದ ಕೊಡುಗೆಯನ್ನು ನೀಡಲಿದೆ.

















