ಮಾಜಿ ಕೇಂದ್ರ ಸಚಿವ ಮತ್ತು ಹಿರಿಯ ಕಾಂಗ್ರೆಸ್ ನಾಯಕರಾದ ಆಸ್ಕರ್ ಫೆರ್ನಾಂಡಿಸ್ ಅವರ ನಿಧನಕ್ಕೆ ಕರ್ನಾಟಕ ರಾಜ್ಯ ಬಿಜೆಪಿ ಫಲಾನುಭವಿಗಳ ಪ್ರಕೋಷ್ಠದ ರಾಜ್ಯ ಸಮಿತಿ ಸದಸ್ಯ ಹಾಗೂ ಮಂಗಳೂರು ವಿಭಾಗ ಪ್ರಭಾರಿ ಅಂಡಾರು ದೇವಿಪ್ರಸಾದ್ ಶೆಟ್ಟಿ ಸಂತಾಪ ಸೂಚಿಸಿದ್ದಾರೆ.
ಸರಳ ಸಜ್ಜನ ನಾಯಕರಾಗಿ ರಾಷ್ಟ್ರ ಮಟ್ಟದಲ್ಲಿ ತಮ್ಮ ಛಾಪನ್ನು ಬೆಳೆಸಿಕೊಂಡಿದ್ದ ಅವರು ಉಡುಪಿ ಸಂಸದರಾಗಿ ಹಲವಾರು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು, ಅವರ ಸೇವೆ ಅನನ್ಯವಾದುದು ಎಂದು ಅವರು ತಿಳಿಸಿದ್ದಾರೆ.
ದೇವರು ಅವರ ಆತ್ಮಕ್ಕೆ ಚಿರಶಾಂತಿ ಕರುಣಿಸಲಿ ಹಾಗೂ ಅವರ ಬಂಧು-ಮಿತ್ರರಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.












