ಧರ್ಮಸ್ಥಳದ ವಿರುದ್ದ ವ್ಯವಸ್ಥಿತ ಷಡ್ಯಂತ್ರ; ತನಿಖೆ ಬಗ್ಗೆ ಡಾ.ಡಿ.ವೀರೇಂದ್ರ ಹೆಗ್ಗಡೆ ಮೊದಲ‌ ಪ್ರತಿಕ್ರಿಯೆ

ಧರ್ಮಸ್ಥಳ: ರಾಜ್ಯ ಹಾಗೂ ದೇಶದಲ್ಲಿ ಸಂಚಲನ ಮೂಡಿಸಿದ ಧರ್ಮಸ್ಥಳದ ತಲೆ ಬುರುಡೆ ಕೇಸ್‌ ಬಗ್ಗೆ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಇದೇ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಇದೊಂದು ವ್ಯವಸ್ಥಿತ ಷಡ್ಯಂತ್ರ ಅಂತ ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ. ಇದೆಲ್ಲ ಅನಾವಶ್ಯಕ ವಾಗಿ ಮಾಡಿದ ಪ್ರಯತ್ನ. ಕ್ಷೇತ್ರ, ಕ್ಷೇತ್ರದ ಇತಿಹಾಸ, ಗೌರವ ಹಾಗೇ ಇದೆ. ಕ್ಷೇತ್ರದ ಬಗ್ಗೆ ಹಿಂದಿನಿಂದಲೂ ಷಡ್ಯಂತ್ರ ಮಾಡಿದ್ದಾರೆ ಅಂತ ಹೇಳಿದ್ದಾರೆ. ಎಸ್ಐಟಿ ತನಿಖೆಯನ್ನು ಸ್ವಾಗತಿಸಿದ ಅವರು, ಇದು ಒಳ್ಳೆಯ ಕೆಲಸ. ಸತ್ಯ ಹೊರಗೆ ಬರಲಿ ಎಂದು ಆಗ್ರಹಿಸಿದ್ದಾರೆ.