ಧರ್ಮಸ್ಥಳ: 5ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ

ಧರ್ಮಸ್ಥಳ: 5ನೇ ಅಂತರಾಷ್ಟ್ರೀಯ ಯೋಗ ದಿನದ ಅಂಗವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಶುಕ್ರವಾರ ಯೋಗ ದಿನಾಚರಣೆಯನ್ನು ಆಯೋಜಿಸಲಾಯಿತು.
ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ಒಂದು ಸಾವಿರ ಶಿಬಿರಾರ್ಥಿಗಳಿಂದ ಸಾಮೂಹಿಕ ಯೋಗ ಪ್ರಾತ್ಯಕ್ಷಿಕೆ ಮೂಲಕ ವಿಶ್ವಯೋಗ ದಿನಾಚರಣೆಯಲ್ಲಿ ನಡೆಯಿತು.
ರಾಷ್ಟ್ರೀಯ ಸೇವಾಯೋಜನೆಯ ಪ್ರತಿನಿಧಿಗಳು, ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕಾಲೇಜಿನ ವಿದ್ಯಾರ್ಥಿಗಳಿಂದ ಯೋಗಾಭ್ಯಾಸ ನಡೆಯಿತು.


ಈ ಸಂದರ್ಭ ರಾಜ್ಯ ಸಣ್ಣನೀರಾವರಿ ಸಚಿವ ಸಿ.ಎಸ್‌.ಪುಟ್ಟರಾಜು, ಬೆಳ್ತಂಗಡಿ ಶಾಸಕ ಹರೀಶ್‌ ಪೂಂಜಾ, ಮಾಜಿ ಶಾಸಕ ಅಭಯಚಂದ್ರ ಜೈನ್‌ ಸೇರಿ ಹಲವು ಗಣ್ಯರು ಉಪಸ್ಥಿತರಿದ್ದರು.
ಕಾರ್ಯಕ್ರಮದ ಬಳಿಕ ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಶಾಂತಿವನ ಪರಿಸರದಲ್ಲಿ ಯೋಗಪ್ರತಿನಿಧಿಗಳಿಂದ ಸಾಮೂಹಿಕ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮಾರ್ಗದರ್ಶನದಲ್ಲಿ ವಿಶ್ವಯೋಗ ದಿನಾಚರಣೆ ಪ್ರಯುಕ್ತ ಈ ವಿಶೇಷ ಕಾರ್ಯಕ್ರಮ ನಡೆಯಿತು.