ಬೆಂಗಳೂರು : ʼಧರ್ಮಸ್ಥಳʼ ದೂರಿಗೆ ಸಂಬಂಧಿಸಿದಂತೆ ಎಸ್‌ಐಟಿ ತನಿಖೆಗೆ ವಕೀಲರು ಆಗ್ರಹಿಸುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಜಿ.ಪರಮೇಶ್ವರ್ ಅವರು,ಅಗತ್ಯ ಬಿದ್ದರೆ ಉನ್ನತ ತನಿಖೆ ನಡೆಸಲಾಗುವುದುʼ ಎಂದು ಸ್ಪಷ್ಟಪಡಿಸಿದ್ದಾರೆ.
ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ದೂರುದಾರನ ದೂರಿಗೆ ಸಂಬಂಧಿಸಿದಂತೆ ಈಗಾಗಲೇ ಪ್ರಾಥಮಿಕ ತನಿಖೆ ಆರಂಭವಾಗಿದೆ. ಅಲ್ಲದೆ, ಈ ವಿಚಾರ ಸಂಬಂಧ ಹೆಚ್ಚಿನ ತನಿಖೆಯ ಆಗತ್ಯವಿದ್ದರೆ ಸರಕಾರ ತೀರ್ಮಾನ ತೆಗೆದುಕೊಳ್ಳುತ್ತದೆ. ಆದರೆ, ಪ್ರಾಥಮಿಕ ತನಿಖೆ ನಡೆಯುತ್ತಿರುವ ಮಧ್ಯೆಯೇ ಎಸ್‌ಐಟಿ ತನಿಖೆಗೆ ಒತ್ತಾಯಿಸಿದರೆ, ಪೊಲೀಸ್ ಇಲಾಖೆ ಇರುವುದೇಕೆ? ಎಂದು ಪ್ರಶ್ನಿಸಿದರು.
ಈ ವಿಷಯದ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿದ್ದೇನೆ. ಅಗತ್ಯಗಳನ್ನು ನೋಡಿಕೊಂಡು ನಾವು ತೀರ್ಮಾನ ಕೈಗೊಳ್ಳುತ್ತೇವೆ ಎಂದು ಹೇಳಿದರು.












