ಬೆಳ್ತಂಗಡಿ: ಐದು ದಶಕಗಳಿಂದ ಸೇವೆ ಸಲ್ಲಿಸಿದ ಶ್ರೀ ಕ್ಷೇತ್ರ ಧರ್ಮಸ್ಥಳದ ಆನೆ ಲತಾ ಶಿವೈಕ್ಯ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳದ ಆನೆ ಲತಾ ಶಿವರಾತ್ರಿಯಂದು ಶಿವ ಪಾದ ಸೇರಿದೆ. 60ವರ್ಷ ಪ್ರಾಯದ ಲತಾ ಕಳೆದ 50 ವರ್ಷಗಳಿಂದ ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಸೇವೆಯಲ್ಲಿ ನಿರತವಾಗಿತ್ತು. ಶುಕ್ರವಾರ ಮಧ್ಯಾಹ್ನದ ವೇಳೆ ಹೃದಯಾಘಾತದಿಂದ ಮೃತಪಟ್ಟಿದೆ.

ಧರ್ಮಸ್ಥಳದಲ್ಲಿ ಪ್ರಸ್ತುತ ಲತಾ, ಲಕ್ಷ್ಮೀ ಹಾಗೂ ಶಿವಾನಿ ಎಂಬ ಹೆಸರಿನ ಆನೆಗಳಿದ್ದು, ಲತಾ ಸಾವಿನಿಂದ ಲಕ್ಷ್ಮೀ ಹಾಗೂ ಶಿವಾನಿ ಆನೆಗಳು ಮಂಕಾಗಿವೆ.