ಬಾಲಿವುಡ್ ನಟ ರಣವೀರ್ ಸಿಂಗ್ ಅಭಿನಯದ ಬಹು ನಿರೀಕ್ಷಿತ ಆ್ಯಕ್ಷನ್ ಸಿನಿಮಾ ಧುರಂಧರ್ 2: ದಿ ರಿವೇಂಜ್ ಇದೀಗ ಒಟಿಟಿ ವೇದಿಕೆಗೆ ಎಂಟ್ರಿ ಕೊಡಲು ಸಜ್ಜಾಗಿದೆ. ಚಿತ್ರಮಂದಿರಗಳಲ್ಲಿ ಭರ್ಜರಿ ಪ್ರದರ್ಶನ ಕಂಡು ಬಾಕ್ಸ್ ಆಫೀಸ್ನಲ್ಲಿ ದಾಖಲೆ ಬರೆದಿದ್ದ ಈ ಸಿನಿಮಾ ಡಿಜಿಟಲ್ ಬಿಡುಗಡೆಯ ಸುದ್ದಿ ಅಭಿಮಾನಿಗಳಲ್ಲಿ ಸಂಭ್ರಮ ಮೂಡಿಸಿದೆ.
ನಿರ್ದೇಶಕ ಆದಿತ್ಯ ಧರ್ ಅವರ ನಿರ್ದೇಶನದಲ್ಲಿ ಮೂಡಿಬಂದ ಈ ಚಿತ್ರದ ಒಟಿಟಿ ಬಿಡುಗಡೆ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆ ನಡೆಯುತ್ತಿದೆ. ಅಧಿಕೃತ ಘೋಷಣೆಗೆ ಮುನ್ನವೇ ಚಿತ್ರದ ಒಟಿಟಿ ಟೈಟಲ್ ಕಾರ್ಡ್ ಆನ್ಲೈನ್ನಲ್ಲಿ ವೈರಲ್ ಆಗಿದ್ದು, ಡಿಜಿಟಲ್ ಆವೃತ್ತಿಗೆ ‘ಧುರಂಧರ್ ದ ರಿವೇಂಜ್ (ರಾ ಆಂಡ್ ಅಂದೇಖಾ)’ ಎಂಬ ಹೆಸರು ಇಡಲಾಗಿದೆ ಎನ್ನಲಾಗಿದೆ.
ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ಮಾಹಿತಿಯ ಪ್ರಕಾರ, ಸಿನಿಮಾ ಇದೇ ಮೇ 15ರಿಂದ ಒಟಿಟಿಯಲ್ಲಿ ಸ್ಟ್ರೀಮಿಂಗ್ ಆರಂಭಿಸಲಿದೆ. ಅಂತರರಾಷ್ಟ್ರೀಯ ಪ್ರೇಕ್ಷಕರಿಗಾಗಿ Netflix ನಲ್ಲಿ ‘ರಾ ಆಂಡ್ ಅಂದೇಖಾ’ ಆವೃತ್ತಿ ಬಿಡುಗಡೆಯಾಗಲಿದ್ದು, ಭಾರತೀಯ ಪ್ರೇಕ್ಷಕರಿಗಾಗಿ JioHotstar ನಲ್ಲಿ ಡಿಜಿಟಲ್ ಪ್ರೀಮಿಯರ್ ನಡೆಯಲಿದೆ ಎಂದು ವರದಿಯಾಗಿದೆ.
ರಣವೀರ್ ಸಿಂಗ್ ಅವರ ಪವರ್ಫುಲ್ ಆ್ಯಕ್ಷನ್ ಅವತಾರ ಮತ್ತು ಆದಿತ್ಯ ಧರ್ ಅವರ ಮೇಕಿಂಗ್ ಶೈಲಿ ಚಿತ್ರಕ್ಕೆ ದೊಡ್ಡ ಮಟ್ಟದ ಮೆಚ್ಚುಗೆ ತಂದುಕೊಟ್ಟಿತ್ತು. ಬಿಗ್ ಬಜೆಟ್ನಲ್ಲಿ ನಿರ್ಮಾಣವಾಗಿದ್ದ ಈ ಸಿನಿಮಾ ಗಲ್ಲಾಪೆಟ್ಟಿಗೆಯಲ್ಲಿ ಭರ್ಜರಿ ಕಲೆಕ್ಷನ್ ಮಾಡಿದ್ದು, ಈಗ ಒಟಿಟಿಯಲ್ಲೂ ಹೊಸ ದಾಖಲೆ ನಿರ್ಮಿಸುವ ನಿರೀಕ್ಷೆ ವ್ಯಕ್ತವಾಗಿದೆ.

















