ಉಡುಪಿ: ಜಿಲ್ಲೆಯಲ್ಲಿ ನಡೆಯುವ ವಿವಿಧ ಸರಕಾರಿ ಕಾರ್ಯಕ್ರಮಗಳಲ್ಲಿ ಅತಿಥಿ ಗಣ್ಯರನ್ನು ಸ್ವಾಗತಿಸುವಾಗ, ಪ್ಲಾಸ್ಟಿಕ್‍ನಿಂದ ಸುತ್ತಿದ ಹೂವಿನ ಬೊಕ್ಕೆಗಳನ್ನು ನೀಡಲಾಗುತ್ತಿದೆ, ಉಡುಪಿ ಜಿಲ್ಲೆಯಲ್ಲಿ ಈಗಾಗಲೇ ಪ್ಲಾಸ್ಟಿಕ್ ಬಳಕೆಯನ್ನು ಕಟ್ಟು ನಿಟ್ಟಾಗಿ ನಿಷೇಧಿಸಲಾಗಿದ್ದು, ಸರಕಾರಿ ಕಾರ್ಯಕ್ರಮಗಳಲ್ಲಿ ಈ ರೀತಿ ಪ್ಲಾಸ್ಟಿಕ್ ಬಳಕೆ ಮಾಡುವುದು ಸಮಂಜಸವಾಗಿರುವುದಿಲ್ಲ.
ಆದ್ದರಿಂದ ಕಾರ್ಯಕ್ರಮಗಳಲ್ಲಿ ಅತಿಥಿ ಗಣ್ಯರನ್ನು ಸ್ವಾಗತಿಸುವಾಗ, ಪ್ಲಾಸ್ಟಿಕ್ ರಹಿತ ಬೊಕ್ಕೆಗಳನ್ನು ನೀಡುವ ಮೂಲಕ, ಜಿಲ್ಲೆಯಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ಕಡ್ಡಾಯವಾಗಿ ನಿಷೇಧಿಸುವಂತೆ ಎಲ್ಲಾ ಇಲಾಖೆಗಳಿಗೆ ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು ತಿಳಿಸಿದ್ದಾರೆ.












