ಕಾರ್ಕಳ: ಗಣಿತನಗರದಲ್ಲಿರುವ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ನೂತನ ಮುಖ್ಯಕಾರ್ಯನಿರ್ವಹಣಾ ಅಧಿಕಾರಿಯಾಗಿ ಕಾರ್ಕಳ ಜ್ಞಾನಸುಧಾ ಪಿ.ಯು.ಕಾಲೇಜಿನ ಪ್ರಾಂಶುಪಾಲ ದಿನೇಶ್. ಎಂ.ಕೊಡವೂರು ಅವರಿಗೆ ಹೆಚ್ಚುವರಿ ಜವಾಬ್ದಾರಿಯನ್ನು ವಹಿಸಿಲಾಗಿದೆ ಎಂದು ಅಜೆಕಾರ್ ಪದ್ಮಗೋಪಾಲ್ ಎಜ್ಯಕೇಶನ್ಟ್ರಸ್ಟ್ನ ಅಧ್ಯಕ್ಷ ಡಾ.ಸುಧಾಕರ ಶೆಟ್ಟಿಯವರು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಮಾರ್ಚ್1 ರಂದು ನಡೆದ ಆಡಳಿತ ಮಂಡಳಿ ಮತ್ತು ಎಲ್ಲಾ 240 ಮಂದಿ ಸಂಸ್ಥೆಯ ಉದ್ಯೋಗಿಗಳ ಸಭೆಯಲ್ಲಿ ದಿನೇಶ್ಎಂ.ಕೊಡವೂರು ಅಧಿಕಾರ ಸ್ವೀಕರಿಸಿದರು.