ಉಡುಪಿ: ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಸರ್ಕಾರಿ ಪಾಲಿಟೆಕ್ನಿಕ್ ಕಾಪುವಿನಲ್ಲಿ ಅಖಿಲ ಭಾರತ ತಾಂತ್ರಿಕ ಶಿಕ್ಷಣ ಪರಿಷತ್ತಿನ ಮಾನ್ಯತೆ ಪಡೆದಿರುವ 3 ವರ್ಷಗಳ ಅವಧಿಯ ಡಿಪ್ಲೋಮಾ ಪ್ರವೇಶಾತಿಗೆ ಎಸ್.ಎಸ್.ಎಲ್.ಸಿ ಉತ್ತೀರ್ಣರಾದ, ಪಿ.ಯು.ಸಿ ಪಾಸ್/ ಫೇಲ್ ಆಗಿರುವ ವಿದ್ಯಾರ್ಥಿಗಳಿಂದ ವೆಬ್ಸೈಟ್ www.dte.kar.nic.inನಲ್ಲಿ ಅಥವಾ ನೇರವಾಗಿ ಸಂಸ್ಥೆಯಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಆಧುನಿಕ ಉದಯೋನ್ಮುಖ ಕೋರ್ಸುಗಳಾದ ಆಟೋಮೇಷನ್ & ರೊಬೋಟಿಕ್ಸ್ ವಿಭಾಗ, ಗಣಕಯಂತ್ರ ವಿಭಾಗ, ಯಾಂತ್ರಿಕ ವಿಭಾಗ ಮತ್ತು ವಿದ್ಯುನ್ಮಾನ ವಿಭಾಗಗಳಲ್ಲಿ ಸೀಟುಗಳು ಲಭ್ಯವಿದ್ದು, ಜೂನ್ 30 ರ ವರೆಗೆ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲರು, ಸರ್ಕಾರಿ ಪಾಲಿಟೆಕ್ನಿಕ್, ಕಾಪು ಮೊ.ನಂ: 9740842743, 9740116084, 9731456754, 9686557675 ಹಾಗೂ 8050015592 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಸಂಸ್ಥೆಯ ಪ್ರಾಚಾರ್ಯರ ಕಚೇರಿ ಪ್ರಕಟಣೆ ತಿಳಿಸಿದೆ.

















