ಡಿಪ್ಲೋಮಾ ಪ್ರವೇಶಾತಿ: ಅರ್ಜಿ ಆಹ್ವಾನ

ಉಡುಪಿ: ಪ್ರಸಕ್ತ ಸಾಲಿನಲ್ಲಿ ರಾಜ್ಯದ ಸರ್ಕಾರಿ ಪಾಲಿಟೆಕ್ನಿಕ್‌ಗಳಲ್ಲಿ ಪ್ರಥಮ ವರ್ಷದ ಡಿಪ್ಲೋಮಾ ಪ್ರವೇಶಾತಿಗಾಗಿ ಎಸ್.ಎಸ್.ಎಲ್.ಸಿ, ಪಿ.ಯು.ಸಿ ಹಾಗೂ ಐ.ಟಿ.ಐ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾದ ಶೇ. 35 ರಷ್ಟು ಅಂಕ ಪಡೆದಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಉಡುಪಿಯ ಸರ್ಕಾರಿ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಪ್ರಥಮ ವರ್ಷದ ಡಿಪ್ಲೋಮಾ ಪ್ರವೇಶ ಬಯಸುವ ಅಭ್ಯರ್ಥಿಗಳು ಸಂಸ್ಥೆಯಲ್ಲಿ ಆಫ್‌ಲೈನ್ ಮೂಲಕ ಅರ್ಜಿಯನ್ನು ಪಡೆದು, ಮೇ 18 ರ ಒಳಗಾಗಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಸರ್ಕಾರಿ ಪಾಲಿಟೆಕ್ನಿಕ್, ಉಡುಪಿ ದೂ.ಸಂಖ್ಯೆ: 0820-2570244 ಅನ್ನು ಸಂಪರ್ಕಿಸಬಹುದು ಎಂದು ಸಂಸ್ಥೆಯ ಪ್ರಾಚಾರ್ಯರ ಕಚೇರಿ ಪ್ರಕಟಣೆ ತಿಳಿಸಿದೆ.